ಕಾರ್ಯಕ್ರಮ

ತೊರೆನೂರು ಗ್ರಾಪಂ: ವಿಕಲಚೇತನರ ಸಮನ್ವಯ ಗ್ರಾಮ ಸಭೆ

ಕುಶಾಲನಗರ, ಫೆ 07: ತೊರೆನೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವಿಕಲಚೇತನರ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಅಧ್ಯಕ್ಷೆ ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು.

ವಿಕಲಚೇತನರಿಗೆ ಸಲ್ಲಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಪಂಚಾಯಿತಿ ಆಡಳಿತ ಕಟಿಬದ್ಧವಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಿಂದ ದೊರಕುವ ಸವಲತ್ತುಗಳನ್ನು ಪೂರೈಸಲಾಗುತ್ತಿದೆ. ತೊರೆನೂರು ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ವಿಕಲಚೇತನರಿಗೆ ವಿಶೇಷವಾದ ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದರು.

ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಅಂಜನಾದೇವಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ 35 ಮಂದಿ ವಿಕಲಚೇತನರಿದ್ದು ಎಲ್ಲರಿಗೂ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಾಗೆಯೇ ಇನ್ನಿತರ ಸೌಲಭ್ಯಗಳ ಅಗತ್ಯವಿದ್ದಲ್ಲಿ ಪಂಚಾಯಿತಿಯ ಆಡಳಿತ ಮಂಡಳಿ ಗಮನಕ್ಕೆ ತರಬೇಕೆಂದು ಅವರು ಮನವಿ ಮಾಡಿದರು.

ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ನ ಸಮುದಾಯ ಆರೋಗ್ಯ ಕಾರ್ಯಕರ್ತೆ ಸುನಿತಾ ಮಾಹಿತಿ ಒದಗಿಸಿದರು.

ಪಂಚಾಯಿತಿ ಸದಸ್ಯರಾದ ಎಂ.ಟಿ.ಬೇಬಿ, ಟಿ.ಸಿ.ಶಿವಕುಮಾರ್, ಯಶೋಧ, ತೀರ್ಥಾನಂದ ಇದ್ದರು. ತೊರೆನೂರು ಗ್ರಾಪಂ ನ ವಿಶೇಷ ಚೇತನರ ಸಂಘದ ಲಿಂಗಪ್ಪ ಸ್ವಾಗತಿಸಿದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!