ಕುಶಾಲನಗರ, ಫೆ 08: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿಗಳ ಸೂಚಿಸಿದರೂ ಇದುವರೆಗೆ ಒತ್ತುವರಿ ತೆರವುಗೊಳಿಸದ ಹಿನ್ನಲೆಯಲ್ಲಿ ಈ ಭಾಗದ ನಿವಾಸಿಗಳು
ಕುಶಾಲನಗರ ತಾಲೂಕು ಕಛೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದರು.
ಹಲವು ದಶಕಗಳಿಂದ ರಸ್ತೆ ತೆರವಿಗೆ ಹೋರಾಟ ನಡೆಸುತ್ತಿದ್ದು ಇದುವರೆಗೆ ಸೂಕ್ತ ಕ್ರಮಕೈಗೊಳ್ಳಲಾಗಿಲ್ಲ. ಹಲವು ಬಾರಿ ಸರ್ವೆ ನಡೆದಿದ್ದು ಇತ್ತೀಚೆಗೆ ಒತ್ತುವರಿ ಭಾಗವನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ ಕೂಡ ತೆರವು ಕಾರ್ಯಾಚರಣೆಗೆ ಸಂಬಂಧಿಸಿದವರು ಮೀನಾಮೇಷ ಎಣಿಸುತ್ತಿದ್ದಾರೆ. ಅದ್ದರಿಂದ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಹಾರ ಸೂಚಿಸುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥ ಎಂ.ಬಿ.ಹರ್ಷ ಮಾಹಿತಿ ನೀಡಿದರು.
ಈ ನಡುವೆ ತಹಸೀಲ್ದಾರ್ ಪ್ರತಿಭಟನಾ ನಿರತರ ಮನವೊಲಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ಮೇರೆ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.
ಈ ಸಂದರ್ಭ ಗ್ರಾಮಸ್ಥರಾದ ರಾಮೇಗೌಡ, ದಿಲೀಪ್, ಸಚಿನ್, ಕುಮಾರ್, ಮಂಜುನಾಥ್ ಮತ್ತಿತರರು ಇದ್ದರು.
Back to top button
error: Content is protected !!