ಟ್ರೆಂಡಿಂಗ್

ಕುಶಾಲನಗರ ಪುರಸಭೆ ಸಾಮಾನ್ಯ ಸಭೆ: ಯುಜಿಡಿ‌ ಪೂರ್ಣಗೊಳಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಕುಶಾಲನಗರ, ಫೆ 17:
ಕುಶಾಲನಗರ ಪುರಸಭೆಯ ಸಾಮಾನ್ಯ ಸಭೆ ಜಿಲ್ಲಾ ಉಪ ವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಅವರ ಅಧ್ಯಕ್ಷತೆಯಲ್ಲಿ ಪುರಸಭೆ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕಳೆದೊಂದು ದಶಕದಿಂದ ಆಮೆಗತಿಯಲ್ಲಿ ಸಾಗುತ್ತಿರುವ ಒಳಚರಂಡಿ ಕಾಮಗಾರಿ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಿತು.
ಕಾಮಗಾರಿ ವಿಳಂಭದ ಬಗ್ಗೆ ಸಭೆಯಲ್ಲಿ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು. ಇತ್ತ ನಿಗದಿತ ಅವಧಿಯಲ್ಲಿ
ಕಾಮಗಾರಿ ಪೂರ್ಣಗೊಳ್ಳದೆ ಪಟ್ಟಣದಲ್ಲಿ ಅವ್ಯವಸ್ಥೆ ಎದುರಾಗಿದೆ. ಕಾಮಗಾರಿಯಿಂದ ಅಲ್ಳಲ್ಲಿ ಉಂಟಾಗಿರುವ ಗುಂಡಿಗಳಿಂದ ಅಪಘಾತಗಳು ಸಂಭವಿಸುತ್ತಿದ್ದು ಇದಕ್ಕೆ ಯಾರನ್ನು ಹೊಣೆ ಮಾಡಬೇಕು ಎಂದು ಸದಸ್ಯ ಜೈವರ್ಧನ್ ಉಪ ವಿಭಾಗಾಧಿಕಾರಿಗಳನ್ನು ಪ್ರಶ್ನಿಸಿದರು. ಇಂದು ನೀಡುವ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಪುರಸಭೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಒಳಚರಂಡಿ ಮಂಡಳಿ ವಿರುದ್ದ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂಬಂಧ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಇತ್ತೀಚಿನ ದಿನಗಳಲ್ಲಿ ಕಾವೇರಿ ನದಿಗೆ ಕಲುಷಿತ ತ್ಯಾಜ್ಯ ಸೇರ್ಪಡೆಯಾಗುತ್ತಿರುವ ಬಗ್ಗೆ ವ್ಯಾಪಕವಾದ ಆಕ್ರೋಷ ವ್ಯಕ್ತಗೊಳ್ಳುತ್ತಿದೆ. ಅಭಿವೃದ್ಧಿಗೆ ಪೂರಕವಾಗಿರುವ ಪ್ರವಾಸೋದ್ಯಮ ಹಾಗೂ ಅದಕ್ಕೆ ಸಂಬಂಧಿಸಿದ ಹೋಟೆಲ್, ಲಾಡ್ಜ್, ರೆಸಾರ್ಟ್ ಗಳಿಂದ ನದಿ ಕಲುಷಿತವಾಗುತ್ತಿರುವ ಆರೋಪಗಳ ಕಾರಣ ನಾಲ್ಕ್ಕೇದು ಹೋಟೆಲ್ ಗಳ ವಿರುದ್ದ ಕ್ರಮಕೈಗೊಳ್ಳಲಾಗಿದೆ. ಈ ಪ್ರಕರಣಗಳಿಗೆ ಶಾಶ್ವತ ಪರಿಹಾರ ಅಗತ್ಯವಿದೆ. ಆದ್ದರಿಂದ ಒಳಚರಂಡಿ ಯೋಜನೆ ಕಾಮಗಾರಿ ಆದಷ್ಟು ಬೇಗ ಚಾಲನೆಗೊಳಿಸುವ ಅಗತ್ಯವಿದೆ ಎಂದರು.
ಕಾಮಗಾರಿ ಪ್ರಗತಿಯ ಕುರಿತು ಒಳಚರಂಡಿ ಮಂಡಳಿ ಮೈಸೂರು ವಿಭಾಗದ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ಸಭೆಗೆ ಮಾಹಿತಿ ಒದಗಿಸಿದರು. ಮಾರ್ಚ್ ಒಳಗಾಗಿ ಒಂದು ಘಟಕ ಕಾರ್ಯಾರಂಭಿಸಲಿದ್ದು ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು.
ಉಳಿದಂತೆ ಸರಕಾರಿ ಜಾಗಗಳ‌ನ್ನು ಪುರಸಭೆ ಸುಪರ್ದಿಗೆ ಪಡೆದುಕೊಳ್ಳುವ ಬಗ್ಗೆ ಸದಸ್ಯ ಡಿ.ಕೆ.ತಿಮ್ಮಪ್ಪ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಪುರಸಭೆ ವ್ಯಾಪ್ತಿಯಲ್ಲಿ
ವಿದ್ಯುತ್ ಕಂಬಗಳಿಂದ ಉಂಟಾಗಿರುವ ಅವ್ಯವಸ್ಥೆ ಬಗ್ಗೆ ಸದಸ್ಯ ವಿ.ಎಸ್.ಆನಂದ್ ಚೆಸ್ಕಾಂ ಅಧಿಕಾರಿಯ ಸೆಳೆದರು. ಹಲವು ಬಾರಿ
ತೆವುಗೊಳಿಸಬೇಕಿರುವ ಕಂಬಗಳ ಬಗ್ಗೆ ಮನವಿ ಸಲ್ಲಿಸಿದರು ಕ್ರಮವಹಿಸದ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದರು.
ಉಳಿದಂತೆ ಅಭಿವೃದ್ಧಿ ಕಾಮಗಾರಿಗಳು, ಹಕ್ಕುಪತ್ರ ವಿತರಣೆ, ಸ್ಮಶಾನ ಜಾಗ ಮಂಜೂರಾತಿ, ಸಂಚಾರಿ ದಟ್ಟಣೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಪುರಸಭೆ ಸದಸ್ಯರುಗಳು, ಅಧಿಕಾರಿ ವರ್ಗದವರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!