ಕುಶಾಲನಗರ, ಫೆ 22: ಕೂಡಿಗೆಯಲ್ಲಿರುವ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆಯ ಹತ್ತನೆ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಬೀಳ್ಕೊಡಲಾಯಿತು.
ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಬಸಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಬುನಾದಿಯ ಮೊದಲ ಹಂತ ಎಸ್. ಎಸ್.ಎಲ್. ಸಿ. ಹಂತ. ಅದರಲ್ಲಿ ಉತ್ತಮ ಅಂಕಗಳನ್ನು ಗಳಿಸಿ, ನಂತರ ನಿರಂತರ ಅಧ್ಯಯನಶೀಲತೆಯನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ತಮ್ಮ ಕೊಡುಗೆಯನ್ನು ನೀಡುವಂತಹ ಪ್ರವೃತ್ತಿಯನ್ನು ಬೆಳಸಿಕೊಂಡಲ್ಲಿ ಭವಿಷ್ಯ ಉಜ್ವಲಗೊಳ್ಳಲಿದೆ. ಆದ್ದರಿಂದ ವಿದ್ಯಾರ್ಥಿಗಳು ಶಿಸ್ತು ಸಂಯಮ ಮೂಲಕ ಶಿಕ್ಷಣದ ಹಂತವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಕೆ. ಪ್ರಕಾಶ್ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪೋಷಕರ ಹಾಗೂ ಗುರುಗಳ ನಿರೀಕ್ಷೆಯಂತೆ ಚೆನ್ನಾಗಿ ಓದಿ ಸಮಾಜದಲ್ಲಿ ಉತ್ತಮ ಸ್ಧಾನಮಾನ ಹೊಂದಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ದೊಂದಿಗೆ ಕಲಿಕೆ ಮುಖೇನ ಎಲ್ಲಾ ವಿಭಾಗದಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆ ಮೂಲಕ ಯಶಸ್ಸುಗಳಿಸಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾ ಕುಮಾರಿ, ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ ಪ್ರಕಾಶ್, ಕೂಡಿಗೆ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಶಾಲಾ ಪೋಷಕರ ಸಮಿತಿಯ ಸದಸ್ಯರಾದ ಮಹದೇವ, ವಿಶುಕುಮಾರ್, ಮಣಿಕಂಠ, ಮಂಜುನಾಥ, ರೂಪ, ರುಬೀನಾ, ಅಂಬಿಕಾ ಸೇರಿದಂತೆ ಶಾಲೆಯ ಶಿಕ್ಷಕರ ವೃಂದ, ವಿದ್ಯಾರ್ಥಿಗಳ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Back to top button
error: Content is protected !!