ಕುಶಾಲನಗರ, ಫೆ 22: ಕೂಡಿಗೆ ಗ್ರಾಮ ಪಂಚಾಯತಿ ಮಾಸಿಕ ಸಭೆ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ. ಟಿ.ಗಿರೀಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಯೋಜನೆಗಳನ್ನು ತುರ್ತಾಗಿ ಕೈಗೊಳ್ಳುವ ಮೂಲಕ ಕ್ರಮಬದ್ಧವಾದ ನಿರ್ವಹಣೆ ಮಾಡುವಂತೆ ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರು ಒಕ್ಕೊರಲಿನ ತೀರ್ಮಾನ ಕೈಗೊಂಡರು.
ಸಭೆಯ ಆರಂಭದಲ್ಲಿ ಖರ್ಚು ವೆಚ್ಚಗಳ ಬಗ್ಗೆ ಚರ್ಚೆ ನಡೆಯಿತು ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಅರುಣ್ ರಾವ್, ಅನಂತ, ಶಿವಕುಮಾರ್, ರವಿ, ಚಂದ್ರು ಅವರು ಗ್ರಾಮ ಪಂಚಾಯತಿಯಲ್ಲಿ ಖರ್ಚು ಮಾಡಿದ ಹಣಕಾಸು ವ್ಯವಸ್ಥೆಗೆ ಬಗ್ಗೆ ಕೇಳಿದಾಗ ಅಧಿಕಾರಿ ವರ್ಗದಿಂದ ಸಮರ್ಪಕವಾದ ಉತ್ತರ ಬಾರದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿ ಇದರ ಬಗ್ಗೆ ತಾಲ್ಲೂಕು ಮಟ್ಟದಲ್ಲಿ ತನಿಖೆ ಕೈಗೊಳ್ಳುವಂತೆ ಸಭೆಯಲ್ಲಿ ಒತ್ತಾಯ ಮಾಡಿದರು.
ಗ್ರಾಮ ಪಂಚಾಯತಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳನ್ನು ಅಭಿವೃದ್ಧಿ ಅಧಿಕಾರಿ ಕ್ರಮಬದ್ಧವಾಗಿ ಅನುಷ್ಠಾನ ಮಾಡುತ್ತಿಲ್ಲ. ಇದರಿಂದಾಗಿ ಅಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆಗೊಳಿಸುವಂತೆ ಜಿಲ್ಲಾ ಮಟ್ಟ ಅಧಿಕಾರಿಗಳಿಗೆ ಪತ್ರವ್ಯವಹಾರ ಮಾಡುವ ಬಗ್ಗೆ ಹಾಜರಿದ್ದ ಸರ್ವ ಸದಸ್ಯರು ತೀರ್ಮಾನ ಕೈಗೊಂಡರು.
ಸ್ವಚ್ಚ ಭಾರತ್ ಯೋಜನೆಯ 1.70.ಲಕ್ಷ ವೆಚ್ಚದಲ್ಲಿ ಕೊಳವೆ ಬಾವಿಗಳನ್ನು ಕೊರೆಸುವ ಮತ್ತು 15ನೇ ಹಣಕಾಸು ಯೋಜನೆ ಕ್ರಿಯಾ ಯೋಜನೆ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದವು. ಜಲ ಜೀವನ್ ಕುಡಿಯುವ ನೀರಿನ ವ್ಯವಸ್ಥೆಯನ್ನು ಉಪ ಗ್ರಾಮಗಳಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡುವ ಬಗ್ಗೆ ಸುದೀರ್ಘ ಚರ್ಚೆ ನಡೆದವು.
ಅಧ್ಯಕ್ಷತೆ ವಹಿಸಿದ್ದ ಕೆ.ಟಿ. ಗಿರೀಶ್ ಮಾತನಾಡಿ,ಕುಡಿಯುವ ನೀರಿನ ವ್ಯವಸ್ಥೆ, ಮತ್ತು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಪ್ರಗತಿಗೆ ಎಲ್ಲಾ ಸದಸ್ಯರ ಸಹಕಾರ ಮುಖ್ಯ ಎಂದರು.ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನಿತ್ ಸೇರಿದಂತೆ ಸದಸ್ಯರು ಹಾಜರಿದ್ದರು.
Back to top button
error: Content is protected !!