ಕುಶಾಲನಗರ ಫೆ 27: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ 14ನೇ ಹಣಕಾಸು ಯೋಜನೆಯಡಿಯಲ್ಲಿ ಪಂಚಾಯಿತಿ ಕಛೇರಿ ಮೇಲ್ಭಾಗದಲ್ಲಿ ರೂ 4,80,000 ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭಾಂಗಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಸಮೀರ ಎಂ.ಎಸ್, ಮಾವಾಜಿ ರಕ್ಷಿತ್, ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಕಾರ್ಯದರ್ಶಿ ಎಂ.ಆರ್.ಶೇಷಗಿರಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರ ಉಪಸ್ಥಿತರಿದ್ದರು.
Back to top button
error: Content is protected !!