ಕಾರ್ಯಕ್ರಮ

ಕುಶಾಲನಗರದಲ್ಲಿ ‌ಮತದಾನ‌ ಮಹತ್ವ ಸಾರುವ ರಂಗೋಲಿ ಸ್ಪರ್ಧೆ

ಕುಶಾಲನಗರ,‌ಏ 01: ಕೊಡಗು ಜಿಲ್ಲಾ ಸ್ಬೀಪ್ ಸಮಿತಿ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ಮತದಾನ ಜಾಗೃತಿ ಆಂದೋಲನ ಅಂಗವಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಕುಶಾಲನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು, ಸ್ತ್ರೀ ಶಕ್ತಿ ಸಂಘ ಹಾಗೂ ಪುರಸಭಾ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾನದ ಮಹತ್ವ ಸಾರುವ ಬಣ್ಣಬಣ್ಣದ ರಂಗೋಲಿ ರಚಿಸಿ ಮತದಾನದ ಮಹತ್ವದ ಬಗ್ಗೆ ಹಾಗೂ ಕಡ್ಡಾಯ ಮತದಾನದ ಅರಿವು ಮೂಡಿಸಿದರು.

ಕುಶಾಲನಗರ ಪುರಸಭೆ ಆರೋಗ್ಯ ನಿರೀಕ್ಷಕ ಉದಯಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!