ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಕೊಡಗು ಜಿಲ್ಲಾ ಘಟಕ ಆಶ್ರಯದಲ್ಲಿ ಕುಶಾಲನಗರದ ವಿವೇಕಾನಂದ ಪಪೂ ಕಾಲೇಜು ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕುವಾರು ಹಾಗೂ ಸಂಯೋಜನವಾರು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶೇ.100 ಫಲಿತಾಂಶ ಪಡೆದ ಕಾಲೇಜುಗಳಿಗೆ ಅಭಿನಂದನೆ ನೆರವೇರಿಸಲಾಯಿತು.
ಸಂಘದ ಅಧ್ಯಕ್ಷ ಫಿಲಿಪ್ ವಾಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತು ಪಾಲನೆ ಮಾಡುವುದು ಅತ್ಯಗತ್ಯ. ಪಾಲಕರು, ಗುರುಗಳಿಗೆ ವಿಧೇಯರಾಗಿರಬೇಕು. ಪೋಷಕರು ಕೂಡ ದೊಡ್ಡಸ್ತಿಕೆಯನ್ನು ಮಕ್ಕಳ ತಲೆಗೆ ತುಂಬಬಾರದು. ಸರಳತೆ ಮೂಲಕ ಪ್ರತಿ ಹಂತದಲ್ಲೂ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಫಿಲಿಪ್ ವಾಸ್ ಮಾತನಾಡಿ, ಸರಕಾರಿ ಶಾಲಾ ಕಾಲೇಜುಗಳು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯಲ್ಲಿ ಶಾಸಕ ಅಪ್ಪಚ್ಚುರಂಜನ್ ಅವರ ಕೊಡುಗೆ ಅಪಾರವಿದೆ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್ ಮಾತನಾಡಿ, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸಿ ಬಗೆಹರಿಸುವಲ್ಲಿ ಸಂಘ ಪ್ರಮುಖ ಪಾತ್ರ ವಹಿಸಿದೆ ಎಂದರು.
ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ಪುಟ್ಟರಾಜು,
ನಿವೃತ್ತ ಪ್ರಭಾರಿ ಉಪನಿರ್ದೇಶಕರಾದ ಜಿ.ಕೆಂಚಪ್ಪ, ಸಂಘದ ಮಾಜಿ ಗೌರವಾಧ್ಯಕ್ಷ ಕೆ.ಜಿ.ಅಶ್ವಿನಿಕುಮಾರ್, ವಿವೇಕಾನಂದ ಪಪೂ ಕಾಲೇಜಿನ ಪ್ರಾಂಶುಪಾಲರಾದ ಕ್ಲಾರಾ ರೇಷ್ಮ
ಸಂಘದ ಜಿಲ್ಲಾ ಸಮಿತಿ ಕಾರ್ಯಾಧ್ಯಕ್ಷ ಟಿ.ಹೇಮಂತ್ ಕುಮಾರ್, ಖಜಾಂಚಿ ಎಚ್.ಆರ್.ಸರ್ವೋತ್ತಮ್ ಸೇರಿದಂತೆ ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ತಾಲೂಕು ಸಮಿತಿಗಳ ಪ್ರಮುಖರು ಇದ್ದರು.
Back to top button
error: Content is protected !!