ಶಿಕ್ಷಣ

ಟೀಮ್ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಕುಶಾಲನಗರ, ಮೇ 08: ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವ ಇತ್ತೀಚಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಮೂಲಕ ಮಾನವೀಯ ಮೌಲ್ಯ, ಸಂಬಂಧಗಳ ಬಗ್ಗೆ ಅರಿತುಕೊಳ್ಳಲು ಸಹಕಾರಿಯಾಗಲಿದೆ ಎಂದು ಕುಂದನಾ ನೃತ್ಯಾಲಯ ಸಂಸ್ಥೆಯ ಸಂಸ್ಥಾಪಕರಾದ ವಿನುತಾ ಹೇಳಿದರು.

ಕುಶಾಲನಗರದ
ಟೀಮ್ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ವತಿಯಿಂದ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು, ಪೋಷಕರು ಮಕ್ಕಳಿಗೆ ಶಾಲಾ ದಿನಗಳು ಮುಗಿಯುತ್ತಿದ್ದಂತೆ ಬೇರೆ ಊರುಗಳಿಗೆ ಕಳುಹಿಸುವ ಬದಲು ಬೇಸಿಗೆ ಶಿಬಿರಗಳಿಗೆ ಸೇರಿಸುವುದರಿಂದ ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಅನುಕೂಲವಾಗುತ್ತದೆ ಎಂದರು.

ಅತಿಥಿಯಾಗಿ ಪಾಲ್ಗೊಂಡಿದ್ದ ಸಮಾಜಸೇವಕ ಪ್ರಭುದೇವ್ ಮಾತನಾಡಿ, ಇಂತಹ ಶಿಬಿರಗಳು ಮಕ್ಕಳಿಗೆ ಜೀವನ ಮೌಲ್ಯ ಕಲಿಸಿದರೆ, ಸಂಬಂಧಗಳ ಮಹತ್ವವನ್ನು ಅರಿವು ಮಾಡಿಕೊಟ್ಟು ಅರ್ಥಪೂರ್ಣವಾದರೆ ಖಂಡಿತವಾಗಿಯೂ ಮಕ್ಕಳ ಜೀವನದಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತವೆ. ಮಕ್ಕಳು ಸ್ವತಂತ್ರ ಮನೋಭಾವ ರೂಢಿಸಿಕೊಳ್ಳಲಿ, ಮೊಬೈಲ್‌, ಟಿ.ವಿಗಳ ಆಕರ್ಷಣೆಯಿಂದ ಹೊರಬರಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕ್ರಿಯೇಟಿವ್ ಅಕಾಡೆಮಿಯ ಸಂಸ್ಥಾಪಕ ಮಹೇಶ್ ಮಾತನಾಡಿ, ಬೇಸಿಗೆ ಶಿಬಿರಗಳು ನಡೆಯುವುದರಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಸೂಕ್ತ ವೇದಿಕೆಯಾಗಿದೆ. ರಜೆಯ ದಿನಗಳಲ್ಲಿ ಮಕ್ಕಳು ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಆಟದ ಜೊತೆ ಪಾಠವನ್ನು ಕಲಿತಂತಾಗುತ್ತದೆ. ಇದರಿಂದ ಮಕ್ಕಳ ಮನಸ್ಸಿನ ಮೇಲೆ ಮತ್ತು ಆರೋಗ್ಯದ ಮೇಲೆ ಒಳ್ಳೆಯ ಬೆಳವಣಿಗೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭ ಪೋಷಕರು ಮತ್ತು ಮಕ್ಕಳಿಂದ ರಾಂಪ್ ವಾಕ್ ನಡೆಯಿತು. ಮಕ್ಕಳಿಂದ ನಡೆದ ಆಕರ್ಷಕ ನೃತ್ಯ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಅಕಾಡೆಮಿಯ ಪ್ರಮುಖರಾದ ದಿವ್ಯಾ ಮಹೇಶ್, ಟೀಮ್ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ನೃತ್ಯ ಸಂಯೋಜಕರಾದ ಕಿರಣ್, ಸಚಿನ್, ನಿಶಿ, ರಮ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!