ರಾಜಕೀಯ

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮಂಜುನಾಥಕುಮಾರ್ ನಾಮಪತ್ರ ಸಲ್ಲಿಕೆ

ಕುಶಾಲನಗರ : ವಿಧಾನಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3 ರಂದು ಜರುಗಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕೆ.ಕೆ.ಮಂಜುನಾಥಕುಮಾರ್ ಗುರುವಾರ ಮೈಸೂರಿನ ಪ್ರಾದೇಶಿಕ ಕಛೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.
ಈ ಸಂದರ್ಭ ಶಿಕ್ಷಣ ಸಚಿವ ಮಧುಬಂಗಾರಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಹೊನ್ನಾಳಿ ಶಾಸಕ ಶಾಂತನಗೌಡ, ಎಂಎಲ್ ಸಿ ಮಂಜುನಾಥ ಭಂಡಾರಿ, ಮಾಜಿ ಎಂಎಲ್ಸಿ ಪ್ರಸನ್ನಕುಮಾರ್, ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ ಕುಮಾರ್, ಶಿಕ್ಷಕರ ಕ್ಷೇತ್ರಕ್ಕೆ ಶಿಕ್ಷಕರೇ ಆಯ್ಕೆಯಾಗುವ ಮೂಲಕ ಶಿಕ್ಷಕರ ಬವಣೆಗಳನ್ನು ಬಗೆಹರಿಸಬೇಕಿದೆ.
ಕಳೆದ ಅವಧಿಗಳಲ್ಲಿ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜನಪ್ರತಿನಿಧಿಗಳು ಶಿಕ್ಷಕರ ಹಿತ ಕಾಯದೇ ಸ್ವಹಿತ ಮೆರೆದಿದ್ದು ಈ ಬಾರಿ ಕ್ಷೇತ್ರದ ಶಿಕ್ಷಕರು ನನ್ನನ್ನು ಚುನಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!