ಕಾರ್ಯಕ್ರಮ

ಕುಶಾಲನಗರದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಕಾವೇರಿಗೆ 159ನೇ ಮಹಾ ಆರತಿ

ಕುಶಾಲನಗರ, ಮೇ 24:
ಗೌತಮ ಬುದ್ಧರ ಸಂದೇಶ ಸರ್ವಕಾಲಕ್ಕೂ ಮಾದರಿಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಹೆಚ್ ಪಿ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ 159ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಪ್ರಭುದ್ಧರಾಗಿ ನೆಮ್ಮದಿ ಜೀವನ ಸಾಗಿಸಬೇಕಾಗಿದೆ ಎಂದರು. ಜೀವನದಿ ಕಾವೇರಿಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸ್ವಚ್ಛ ಕಾವೇರಿ ಕನಸು ನನಸಾಗಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಭೀಮಾವಾದ ರಾಜ್ಯ ಸಂಘಟನಾ ಸಂಚಾಲಕರಾದ ಕೆ ಬಿ ರಾಜು ಅವರು ಮಾತನಾಡಿ, ಕಳೆದ ಏಳು ದಶಕಗಳಿಂದ ಎಂದೂ ಕಾಣದ ಪರಿಸ್ಥಿತಿ ಈ ಬಾರಿ ಜೀವನದಿ ಕಾವೇರಿಯಲ್ಲಿ ಕಂಡು ಬಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರತಿಯೊಬ್ಬರೂ ಪ್ರಕೃತಿಯ ಸಂರಕ್ಷಣೆಗೆ ಪಣತೊಡಬೇಕಾಗಿದೆ. ಕಾವೇರಿ ನದಿ ಸಂರಕ್ಷಣೆ ಬಗ್ಗೆ ನಿರಂತರ ಕಾಳಜಿ ಹೊಂದಿರುವ ಕಾವೇರಿ ಮಹಾ ಆರತಿ ಬಳಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಕುಂಕುಮಾರ್ಚನೆ, ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಬಳಗದ ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಡಿ ಆರ್ ಸೋಮಶೇಖರ್, ಧರಣಿ ಚೈತನ್ಯ ಮತ್ತಿತರರು ಇದ್ದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!