ಕುಶಾಲನಗರ, ಮೇ 27: ಶನಿವಾರಸಂತೆ ಪೊಲೀಸ್ ವ್ಯಾಪ್ತಿಯ ಸುಳುಗಳಲೆ ಕಾಲೋನಿ ನಿವಾಸಿ ಸುಂದರ್.ಬಿ.ಕೆ ಎಂಬವವರು ದಿನಾಂಕ: 24-05-2024 ರಂದು ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ತೆರಳಿದ್ದು, ಮಧ್ಯಾಹ್ನ ಸಮಯ ಸುಮಾರು 12.30 ಗಂಟೆಗೆ ಸುಂದರ್ ಅವರ ಮಗಳು ಮನೆಗೆ ಬಂದು ನೋಡಿದಾಗ ಮನೆಯ ಬೀರು ಮುರಿದು ಅಂದಾಜು 51.5 ಗ್ರಾಂ ಚಿನ್ನಾಭರಣಗಳನ್ನು ಅಪರಿಚಿತ ವ್ಯಕ್ತಿಗಳು ಕಳ್ಳತನ ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಧಿಕಾರಿ/ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಲಾಗಿರುತ್ತದೆ.
ಸದರಿ ಪ್ರಕರಣದ ಆರೋಪಿಗಳ ಪತ್ತೆಯ ಸಲುವಾಗಿ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ, ಸೋಮವಾರಪೇಟೆ ಉಪವಿಭಾಗ, ಪ್ರೀತಂ.ಡಿ, ಪಿಐ, ಶನಿವಾರಸಂತೆ ಪೊಲೀಸ್ ಠಾಣೆ, ರವಿಶಂಕರ್.ಕೆ.ಆರ್. ಪಿಎಸ್‌ಐ ಮತ್ತು ಗೋವಿಂದರಾಜು, ಪಿಎಸ್ಐ, ಶನಿವಾರಸಂತೆ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 27-05-2024 ರಂದು ಸುಳುಗಳಲೆ ನಿವಾಸಿಯಾದ ಜೀವನ್, (25 ವರ್ಷ) ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಆರೋಪಿಯಿಂದ 43 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಇದರೊಂದಿಗೆ ದಿನಾಂಕ: 11-02-2024 ರಂದು ಶನಿವಾರಸಂತೆಯ ತ್ಯಾಗರಾಜ ಕಾಲೋನಿಯಲ್ಲಿನ ಶ್ರೀ ವಿಜಯ ವಿನಾಯಕ ದೇವಸ್ಥಾನದ ಕಚೇರಿಯ ಬೀಗವನ್ನು ಒಡೆದು ದೇವಸ್ಥಾನದ ಕಾಣಿಕೆ ಹುಂಡಿಯನ್ನು ಕಳವು ಮಾಡಿರುವುದು ವಿಚಾರಣೆಯಲ್ಲಿ ತಿಳಿದುಬಂದಿರುತ್ತದೆ.
ಸದರಿ ಎರಡು ಪ್ರಕರಣಗಳ ಆರೋಪಿಯನ್ನು ಪತ್ತೆ ಹಚ್ಚಿ ಸಂಪೂರ್ಣ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
Back to top button
error: Content is protected !!