ಕುಶಾಲನಗರ, ಜೂ 03: ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಟ/ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟ/ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಮಹೇಶ್ ಕುಮಾರ್, ಡಿಎಸ್ಪಿ, ಮಡಿಕೇರಿ ಉಪವಿಭಾಗ, ಮತ್ತು ಶ್ರೀ ಉಮೇಶ್.ಯು. ಪಿಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀ ಶ್ರೀನಿವಾಸಲು, ಪಿಎಸ್ಐ & ಶ್ರೀ ರಮೇಶ್ ಕರಕಿಕಟ್ಟಿ, ಪಿಎಸ್ಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 01-06-2024 ರಂದು ಮೂರ್ನಾಡು ನಗರದ ಕುಂಬಳದಾಳು ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು/ಮಾರಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಅಭ್ಯತ್ಮಂಗಲ ನಿವಾಸಿ ಪ್ರಶಾಂತ್.ಹೆಚ್ .ಕೆ. 32 ವರ್ಷ ಹಾಗೂ ಎಂ.ಬಾಡಗ ನಿವಾಸಿ ಬೋಪಯ್ಯ.ಎ.ಎಸ್, 31 ವರ್ಷ ಎಂಬುವವರನ್ನು 419.93 ಗ್ರಾಂ ಗಾಂಜಾ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ ಹಾಗೂ ಕೃತ್ಯಕ್ಕೆ ಬಳಸಿದ 02-ಮೊಬೈಲ್ & 01-ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಸದರಿ ಪ್ರಕರಣದಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
Back to top button
error: Content is protected !!