ಧಾರ್ಮಿಕ

ನರೇಂದ್ರ ಮೋದಿ, ಯದುವೀರ್ ಒಡೆಯರ್ ಯಶಸ್ಸಿಗೆ ರಂಗಸಮುದ್ರದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

ಕುಶಾಲನಗರ, ಜೂ 13: ನರೇಂದ್ರ ಮೋದಿ ಅವರು 3ನೇ ಬಾರಿಗೆ ಭಾರತ ದೇಶದ ಪ್ರಧಾನ ಮಂತ್ರಿಗಳಾದ ಹಿನ್ನಲೆಯಲ್ಲಿ ಪ್ರಧಾನಿ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಅವರ ಯಶಸ್ಸಿಗಾಗಿ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಶ್ರೀ ಜೋಡಿ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

ಸ್ಥಳೀಯ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಧಾನಿ ಹಾಗೂ ಸಂಸದರ ಆರೋಗ್ಯ, ಆಯಸ್ಸು, ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭ ಕೊಡಗು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಆರ್.ಕೆ.ಚಂದ್ರು, ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ರಕ್ಷಿತ್ ಮಾವಾಜಿ, ಸೋಮವಾರಪೇಟೆ ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿ ಸಿದ್ದೇಟಿ ಅನುಪಮಾ, ಬೂತ್ ಅಧ್ಯಕ್ಷ ವುಲೂವಾರ ಶಿವಕುಮಾರ್, ಹಾಗೂ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!