ಕುಶಾಲನಗರ ಜೂ 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಸೋಮವಾರಪೇಟೆ ಯೋಜನೆ ವತಿಯಿಂದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಬಳಗುಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಆರ್.ಮೋಹನ, ಗ್ರಾಮ ಪಂಚಾಯಿತಿಯಲ್ಲಿ ಕಸ ಸಂಗ್ರಹಣೆ ಮಾಡಲಾಗುತ್ತಿದ್ದು, ಒಣ ಕಸ ಹಾಗೂ ಹಸಿ ಕಸ ವಿಂಗಡಿಸಿ ನೀಡಲು, ಹಾಗೂ ಪ್ಲಾಸ್ಟಿಕ್ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ವಹಿಸಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಆರಕ್ಷಕ ಠಾಣೆಯ ಶಶಿಕುಮಾರ್, ಶಾಲೆಯ ಮುಖ್ಯೋಪಾಧ್ಯಾಯರಾದ ಭಾಗ್ಯ, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರಶಿದ್, ಆಶಾ ಕಾರ್ಯಕರ್ತರದ ಶಾರದ ಬಿ ಆರ್, ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ಸುನಿತಾ, ಶಾಲಾ ಸಹ ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಶಾಲೆಯ ಮಕ್ಕಳು, ಊರಿನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Back to top button
error: Content is protected !!