ಟ್ರೆಂಡಿಂಗ್

ಮುಳ್ಳುಸೋಗೆ : ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಲೇಖನ ಸಾಮಾಗ್ರಿ ವಿತರಣೆ

ಕುಶಾಲನಗರ, ಜೂ 19 : ಮುಂದಿನ ಶೈಕ್ಷಣಿಕ ಸಾಲಿನಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ.ತರಗತಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು.

ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುರಸಭೆ ನಾಮನಿರ್ದೇಶಿತ ಸದಸ್ಯ ವಿ.ಜೆ.ನವೀನ್ ಕುಮಾರ್ ಹಾಗೂ ಗುತ್ತಿಗೆದಾರ ಅನಿಲ್ ಅವರು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಿಸಲು ಶಿಕ್ಷಕರು ಹಾಗೂ ಸಾರ್ವಜನಿಕರು ಶ್ರಮಿಸಬೇಕು ಎಂದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಉಚಿತ ಸಮವಸ್ತ್ರ, ಪಠ್ಯ ಪುಸ್ತಕ, ಮಧ್ಯಾಹ್ನ ಬಿಸಿ ಊಟ, ವಿದ್ಯಾರ್ಥಿ ವೇತನ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಜೊತೆಗೆ ಶಾಲೆಗಳಿಗೆ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಿದೆ. ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಮುಖಂಡರಾದ ಶಿವಶಂಕರ್, ಕಿರಣ್,  ರಮೇಶ್, ಗ್ರಾಮ ಪಂಚಾಯತಿ ಮಾಜಿ ಜನಪ್ರತಿನಿಧಿಗಳಾದ ಕುಮಾರ್ ಸ್ವಾಮಿ, ಸದಸ್ಯರಾದ ಪಾರ್ವತಿ ವಿ.ಟಿ, ಪದ್ಮಾ, ಕಾಂಗ್ರೆಸ್ ಮುಖಂಡರಾದ ಎಂ.ಎಂ.ಪ್ರಕಾಶ್, ರಂಜನ್ ಹೆಬ್ಬಾಲೆ, ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ, ಸಹ ಶಿಕ್ಷಕರು ಶಿವಲಿಂಗು ರಾಗಿಣಿ, ಮೇರಿ, ಎಚ್.ಕೆ.ವಿಜಯ ವಾಣಿ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್ ಮತ್ತಿತರರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!