ಕುಶಾಲನಗರ, ಜು 16: ಕುಶಾಲನಗರ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಪಂಚಾಯ್ತಿ ಅಧ್ಯಕ್ಷರಾದ ಬಿ.ಜೈವರ್ಧನ್ ಅಧ್ಯಕ್ಷತೆಯಲ್ಲಿ ಪಂಚಾಯ್ತಿ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಸಭೆಯಲ್ಲಿ ಪ್ರಮುಖವಾಗಿ ಪ್ರವಾಹ ಪರಿಸ್ಥಿತಿ ಬಗ್ಗೆ ತೀವ್ರ ಚರ್ಚೆ ನಡೆಯಿತು. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸಲಹೆ ಸೂಚನೆಗಳನ್ನು ಸದಸ್ಯರಿಂದ ಪಡೆಯಲಾಯಿತು. ಯುಜಿಡಿ ಕಾಮಗಾರಿ ಅಪೂರ್ಣವಾಗಿದ್ದು ಪ್ರತಿ ಸಭೆಯಲ್ಲಿ ವ್ಯರ್ಥ ಚರ್ಚೆನಡೆಸುತ್ತಿರುವ ಬಗ್ಗೆ ಸದಸ್ಯ ನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದರು.
ಯುಜಿಡಿ ಕಾಮಗಾರಿ ವಿಳಂಭ ಬಗ್ಗೆ ಅಧಿಕಾರಿಗಳ ವಿರುದ್ದ ಸದಸ್ಯರಾದ ಕೆ.ಜಿ.ಮನು, ಡಿ.ಕೆ.ತಿಮ್ಮಪ್ಪ, ಅಮೃತ್ ರಾಜ್, ವಿ.ಎಸ್.ಆನಂದಕುಮಾರ್ ಆಕ್ರೋಷ ವ್ಯಕ್ತಪಡಿಸಿದರು.
ಸಭೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಸುರಯ್ಯಭಾನು, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಆರೋಗ್ಯ ನಿರೀಕ್ಷಕ ಉದಯ್ ಕುಮಾರ್ ಸೇರಿದಂತೆ ಸದಸ್ಯರುಗಳು, ಅಧಿಕಾರಿ, ಸಿಬ್ಬಂದಿಗಳು ಇದ್ದರು.