ಪ್ರತಿಭಟನೆ

ವಿದ್ಯುತ್ ಕಡಿತ: ಚೆಸ್ಕಾಂ ಗೆ ಮುತ್ತಿಗೆ.

ಕುಶಾಲನಗರ, ಜು 29:

ಕುಶಾಲನಗರದಲ್ಲಿ ಅನಿಯಮಿತ ವಿದ್ಯುತ್ ಕಡಿತ ಉಂಟಾಗುತ್ತಿದ್ದು, ಈ ಬಗ್ಗೆ ದೂರು ನೀಡಿದರೂ ಕೂಡ ಚೆಸ್ಕಾ
ಅಧಿಕಾರಿ,‌ಸಿಬ್ಬಂದಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ
ಕುಶಾಲನಗರದ ಗೆಳೆಯರ ಬಳಗ ಹಾಗೂ ಸಾರ್ವಜನಿಕರು ಚೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕುಶಾಲನಗರದ ಬಿ ಎಂ ರಸ್ತೆಯಲ್ಲಿ ಹಾಗೂ ಸುತ್ತಮುತ್ತಲು ಬೆಳಗ್ಗೆಯಿಂದಲೂ ವಿದ್ಯುತ್ ಕಡಿತ ಉಂಟಾಗಿತ್ತು. ಕೂಡಲೇ ಸೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕೂಡ ಸ್ಪಂದಿಸದೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕಚೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ನಿರ್ಲಕ್ಷ್ಯ ವಹಿಸಿದ ಇಲಾಖೆ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಇದೇ ಸಂದರ್ಭ ಮಾತನಾಡಿದ ಪುರಸಭೆ ಸದಸ್ಯ ವಿ.ಎಸ್ ಆನಂದ್ ಕುಮಾರ್, ಬೆಳಗ್ಗೆ 10 ಗಂಟೆಯಿಂದ ವಿದ್ಯುತ್ ಕಣ್ಣ ಮುಚ್ಚಾಲೆ ಆಡುತ್ತಿದ್ದು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿ ಸರಿಪಡಿಸಲು ಆಗ್ರಹಿಸಲಾಯಿತು. ಆದರೂ ಕೂಡ ಸರಿಪಡಿಸುವಂತ ಕಾರ್ಯಕ್ಕೆ ಮುಂದಾಗಲಿಲ್ಲ. ಇದರಿಂದ ಸಾವಿರಾರು ರೂಪಾಯಿಗಳ ಅಕ್ವೇರಿಯಂ ಮೀನುಗಳು ಸತ್ತು ಹೋಗಿದೆ. ಕೂಡಲೆ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ‌ ಜರುಗಿಸಬೇಕಿದೆ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಚೆಸ್ಕಾಂ ಎ ಇ ಇ.ಮಂಜುನಾಥ್,ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆಯ ಸಂದರ್ಭ ಬಳಗದ ಆಯುಬ್, ರಾಕಿ, ಚಂದನ್, ಸಂತೋಷ್ ಹೆಚ್ ಜೆ, ಗೋಪಾಲ್, ರಾಕೇಶ್, ನಿಜಾಂ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!