ಕುಶಾಲನಗರ, ಆ 13: ಕುಶಾಲನಗರದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಆಗಸ್ಟ್ 18 ರ ಭಾನುವಾರ ಕುಶಾಲನಗರ ಬೈಪಾಸ್ ರಸ್ತೆಯ ವಾಸವಿ ಮಹಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಟಿ.ಎಸ್.ಶಾಂಭಶಿವಯ್ಯ ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಘವು 2024 ಫೆಬ್ರವರಿ ತಿಂಗಳಲ್ಲಿ ಕಾರ್ಯಾರಂಭ ಮಾಡಿತು. ಪ್ರಾರಂಭಿಕವಾಗಿ 446 ಮಂದಿ ಷೇರುದಾರರಿಂದ 12 ಲಕ್ಷದ 13 ಸಾವಿರದ 100 ರೂಗಳನ್ನು ಸಂಗ್ರಹಿಸಿದೆ. ಸೌಹಾರ್ದ ನಿಯಮದ ಪ್ರಕಾರ 2023-24ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಹಾಗೂ ವಾರ್ಷಿಕ ಮಹಾಸಭೆ ನಡೆಸಬೇಕಾಗಿರುವುದರಿಂದ ಈಗಾಗಲೆ ಎಲ್ಲಾ ಷೇರುದಾರರಿಗೆ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ. ಆಹ್ವಾನ ಪತ್ರಿಕೆ ತಲುಪದೇ ಇರುವವರು ಇದನ್ನೇ ವೈಯಕ್ತಿಕ ಆಹ್ವಾನವೆಂದು ಪರಿಗಣಿಸಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಅವರು ಕೋರಿದರು.
ಸಂಘದ ನಿರ್ದೇಶಕರಾದ ಹೆಚ್.ವಿ.ಶಿವಪ್ಪ ಹಾಗೂ ಎ.ಆರ್.ಮಮತಾ ಮಾತನಾಡಿ,ಮಹಾಸಭೆಗೆ ಸಮಾಜ ಬಾಂಧವರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕಿದೆ ಎಂದು ಕೋರಿದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಬಸವಣ್ಣಯ್ಯ ಮಾತನಾಡಿ, ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸಿದರು.
ಗೋಷ್ಠಿಯಲ್ಲಿ ನಿರ್ದೇಶಕರಾದ ಕೆ.ಡಿ.ಪ್ರಶಾಂತ್, ಹೆಚ್.ಎಸ್.ಪುಟ್ಟರಾಜು ಇದ್ದರು.
Back to top button
error: Content is protected !!