ಕುಶಾಲನಗರ, ಆ 13: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗುತ್ತಿರುವ ಮತಾಂಧ ಶಕ್ತಿಗಳ ವಿರುದ್ದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸರ್ವ ಧರ್ಮೀಯರು ಪಾಲ್ಗೊಂಡು ಸಾಮರಸ್ಯದ ಘೋಷಣೆಗಳನ್ನು ಮೊಳಗಿಸಿದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಮತಾಂಧ ಶಕ್ತಿಗಳ ವಿರುದ್ದ ಧಿಕ್ಕಾರ ಕೂಗಿ ಆಕ್ರೋಷ ವಕ್ತಪಡಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಬ್ದುಲ್ ರಜಾಕ್, ಎಲ್ಲಾ ಧರ್ಮದವರನ್ನು ಒಳಗೊಂಡ ಕಾಂಗ್ರೆಸ್ ಪಕ್ಷ ಸಹಜವಾಗಿ ಯಾವುದೇ ಧರ್ಮೀಯರಿಗೆ ಅನ್ಯಾಯವಾದಾಗ ಧ್ವನಿ ಎತ್ತಲಿದೆ. ಬಾಂಗ್ಲಾದೇಶ ದಲ್ಲಿ ನಡೆಯುತ್ತಿರುವ ಘಟನೆ ಬಗ್ಗೆ ಪ್ರಧಾನಿ ಮೋದಿ ಮೌನ ವಹಿಸಿರುವುದು ಖಂಡನೀಯ ಎಂದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ,
ಇತರೆ ಧರ್ಮೀಯರ ವಿರುದ್ದ ಧ್ವೇಷ ಸಾಧಿಸುವ ಮತಾಂಧ ಮನಸ್ಥಿತಿಗಳ ವಿರುದ್ದ ಕಾಂಗ್ರೆಸ್ ಸದಾ ಧ್ವನಿ ಎತ್ತಲಿದೆ.ಎಲ್ಲೆಡೆ ಸಾಮರಸ್ಯ, ಸಹಬಾಳ್ವೆ ನೆಲೆಸಬೇಕೆಂಬುದೇ ಕಾಂಗ್ರೆಸ್ ನ ಧ್ಯೇಯ. ಮಾನವನ ಐಕ್ಯತೆಗೆ ಭಂಗ ಬರುವೆಲ್ಲೆಡೆ ಹೋರಾಟ ನಡೆಸಿ ಅನ್ಯಾಯಕ್ಕೊಳಗಾದವರ ಕಣ್ಣೀರೊರೆಸುವ ಕೆಲಸ ಮಾಡುತ್ತಾ ಬರುತ್ತಿದೆ. ಹಿಂದೂ ಸಾಮ್ರಾಜ್ಯದ ಸಾಮ್ರಾಟ ಎಂದು ಕರೆಸಿಕೊಳ್ಳುವ ಪ್ರಧಾನಿ ಮೋದಿ ಪಕ್ಕದ ರಾಷ್ಟ್ರದಲ್ಲಿ ಹಿಂದೂಗಳಿಗೆ ಉಂಟಾಗುತ್ತಿರುವ ಅನಾಯ ತಡೆಗಟ್ಟಲು ವಿಫಲವಾಗಿದ್ದಾರೆ ಎಂದು ಆರೋಪಿಸಿದರು. ಮುಸ್ಲಿಂ ರಾಷ್ಟ್ರಗಳನ್ನು ಭಾರತದೊಂದಿಗೆ ಒಗ್ಗೂಡಿಸುವ ಅಖಂಡ ಭಾರತ ಪರಿಕಲ್ಪನೆ ಹಾಸ್ಯಾಸ್ಪದ.ಇದರಿಂದ ಭಾರತದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಲಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್ ಮಾತನಾಡಿ, ವಿಶ್ವ ಮಾನವ ಸಂದೇಶ ನೀಡಿದ ಭಾರತದಲ್ಲಿ ಪ್ರತಿಯೊಬ್ಬರೂ ಕೂಡ ಇಂತಹ ಮತಾಂಧ ಶಕ್ತಿಗಳ ವಿರುದ್ದ ಹೋರಾಡಬೇಕಿದೆ. ಅಂತೆಯೇ ಸರ್ವ ಧರ್ಮ ಸಮಾನತೆ ಪ್ರತಿಪಾದಿಸುವ ಕಾಂಗ್ರೆಸ್ ಪಕ್ಷ ಕೂಡ ಈ ಕೃತ್ಯ ವನ್ನು ಪ್ರಬಲವಾಗಿ ಖಂಡಿಸುತ್ತದೆ. ಕೂಡಲೆ ಪ್ರಧಾನ ಮೋದಿ ಬಾಂಗ್ಲಾದೇಶದ ಹಿಂದೂಗಳನ್ನು ರಕ್ಷಿಸುವತ್ತ ಕ್ರಮವಹಿಸಬೇಕಿದೆ ಎಂದು ಆಗ್ರಹಿಸಿದರು.
ವಕೀಲ ಆರ್.ಕೆ.ನಾಗೇಂದ್ರ ಬಾಬು ಮಾತನಾಡಿ, ಬಾಂಗ್ಲಾದಲ್ಲಿ ಪ್ರಾಣ ಕಳೆದುಕೊಂಡ ಹಿಂದೂ ಸಹೋದರರ ಆತ್ಮಕ್ಕೆ ಶಾಂತಿ ಲಭಿಸಬೇಕು, ಉಳಿದವರನ್ನು ಭಗವಂತ ರಕ್ಷಿಸುವಂತೆ ಪ್ರಾರ್ಥಿಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸದಸ್ಯ ಶಾಜಿ, ಪುರಸಭಾ ಸದಸ್ಯರಾದ ದಿನೇಶ್, ಶಿವಶಂಕರ್, ನವೀನ್ ಗೌಡ, ಹರೀಶ್, ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಸುನಿತಾ, ಕೃಷ್ಣೇಗೌಡ, ಜಿ.ಬಿ.ಜಗದೀಶ್, ಟಿ.ಬಿ.ಜಗದೀಶ್, ಶಿವಕುಮಾರ್, ಲತೀಫ್, ಮೈಸಿ ಕತ್ತಣ್ಣಿರ,ಚಂದ್ರು, ನಂಜುಂಡಸ್ವಾಮಿ ಮತ್ತಿತರರು ಇದ್ದರು.
Back to top button
error: Content is protected !!