ಕುಶಾಲನಗರ, ಆ 14: ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಮತ್ತು ಕಂದಾಯ ಇಲಾಖೆ ವತಿಯಿಂದ ಅ. 13 ರಂದು 78ನೇ ವರ್ಷದ ಸ್ವಾತಂತ್ರ್ಯ ದಿನದ ಪ್ರಯುಕ್ತ ಹರ್ ಘರ್ ತಿರಂಗ ಅಭಿಯಾನವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ದುಬಾರೆ ಕಾವೇರಿ ನದಿಯಲ್ಲಿ ರಾಪ್ಟಿಂಗ್ ಮಾಡುವ ಮೂಲಕ ದೇಶಾಭಿಮಾನವನ್ನು ಆಚರಿಸಲಾಯಿತು.
ಬುಧವಾರ ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಗ್ರಾಪಂ ಕಛೇರಿ ಹಾಗೂ ಚಿಕ್ಲಿಹೊಳೆ ಜಲಾಶಯದಲ್ಲಿ ಅಭಿಯಾನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎಲ್. ವಿಶ್ವ ಉಪಾಧ್ಯಕ್ಷೆ ಕುಸುಮ ಪಿ.ಎನ್, ಸದಸ್ಯರಾದ ಸಮೀರ, ತಹಸೀಲ್ದಾರ್ ಕಿರಣ್ ಗೌರಯ್ಯ, ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಸಿಬ್ಬಂದಿಗಳು ಕಂದಾಯ ಇಲಾಖೆ ಸಿಬ್ಬಂದಿಗಳು, ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು, ರಾಪ್ಟೀಂಗ್ ಗೈಡ್ಗಳು ಅಭಿಯಾನದಲ್ಲಿ ಭಾಗವಹಿಸಿದ್ದರು.
Back to top button
error: Content is protected !!