ಪಿರಿಯಾಪಟ್ಟಣ ಸೆ 02: ಕೇರಳ ರಾಜ್ಯದ ವಯನಾಡಿನಲ್ಲಿ ಇತ್ತಿಚೆಗೆ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಬದುಕು ಕಳೆದುಕೊಂಡ ಕುಟುಂಬಗಳಿಗೆ ಆರ್ಥಿಕ ಸಹಕಾರ ಹಾಗೂ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ಸಂಸ್ಥೆಯ ಅಧ್ಯಕ್ಷ ಎಂ.ಎಂ.ರಾಜೇಗೌಡ ರವರ ತಂಡ ಕೇರಳದ ವಯನಾಡಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಹಾಯಹಸ್ತ ನೀಡಿ ಬದುಕು ಕಳೆದುಕೊಂಡ ಕುಟುಂಬಗಳಿಗೆ ಮಾನಸಿಕ ಸ್ಥೈರ್ಯ ಉದ್ದೇಶದಿಂದ ಭೇಟಿ ನೀಡಿತ್ತು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಎಂ.ಎಂ.ರಾಜೇಗೌಡ ಮಾತನಾಡಿ ನಿಸರ್ಗ ಮತ್ತು ಮಾನವ ನಿರ್ಮಿತ ವಿಪತ್ತುಗಳು ಜಾಗತಿಕವಾಗಿ ಪದೇ ಪದೆ ಸಂಭವಿಸುತ್ತಿದ್ದು, ಭಾರತವೂ ಇದಕ್ಕೆ ಹೊರತಾಗಿಲ್ಲ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಹಾನಿಯ ವಿರುದ್ಧ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಇಂದು ದೇಶದ ವಿವಿಧ ರಾಜ್ಯಗಳು ಸೇರಿದಂತೆ ವಿಶ್ವದೆಲ್ಲೆಡೆ ನೈಸರ್ಗಿಕ ವಿಪತ್ತು ಕುರಿತು ಜಾಗೃತಿ ಹಾಗೂ ಸಹಕಾರ ನೀಡಲು ಕೇರಳದ ವಯನಾಡಿಗೆ ಭೇಟಿ ನೀಡಿ ಅಲ್ಲಿನ ಜನತೆಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ವಯನಾಡು ಪ್ರಾಕೃತಿಕ ವಿಕೋಪ ಪರಿಹಾರ ನಿಧಿಗೆ ಪಿರಿಯಾಪಟ್ಟಣ ರೋಟರಿ ಸಂಸ್ಥೆ ವತಿಯಿಂದ 60 ಸಾವಿರ ದೇಣಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಕೇರಳದ ಕಲ್ಬೆಟ್ಟ ರೋಟರಿ ಕ್ಲಬ್ ಅಧ್ಯಕ್ಷ ಶಶಿಧರ್, ಪ್ರಧಾನ ಕಾರ್ಯದರ್ಶಿ ಸುಚಿತ್, ಪಿರಿಯಾಪಟ್ಟಣ ರೋಟರಿ ಸಂಸ್ಥೆ ಕಾರ್ಯದರ್ಶಿ ಐಕೆಪಿ ಹೆಗಡೆ, ಪದಾಧಿಕಾರಿಗಳಾದ ಮನುಗನಹಳ್ಳಿ ಮಧು, ಲೋಕಪಾಲಯ್ಯ, ಅಂಬ್ಲಾರೆ ಬಸವೇಗೌಡ, ಪ್ರಕಾಶ್, ಕಿರಂಗೂರು ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Back to top button
error: Content is protected !!