ಅರಣ್ಯ ವನ್ಯಜೀವಿ

ಬೀದಿ ನಾಯಿಗಳ ದಾಳಿಗೆ ಜಿಂಕೆ ಬಲಿ

ಕುಶಾಲನಗರ, ಸೆ. 5: ಯಡವನಾಡು ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಬಂದ ಗಂಡು ಜಿಂಕೆಯ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿ ಸಾಯಿಸಿದ ಘಟನೆ ನಡೆದಿದೆ.

 

ಕೂಡಿಗೆ- ಸೋಮವಾರಪೇಟೆ ಮುಖ್ಯ ರಸ್ತೆಯ ಯಡವನಾಡು ಮೀಸಲು ಅರಣ್ಯ ಪ್ರದೇಶದ ಸಮೀಪದಲ್ಲಿರುವ ಕುಡಿಯುವ ನೀರಿನ ಪಂಪ ಹೌಸ್ ಪಕ್ಕದಲ್ಲಿ ಜಿಂಕೆ ಮೃತದೇಹ ಪತ್ತೆಯಾಗಿದೆ.

ರಸ್ತೆಯ ಬದಿಯಲ್ಲಿ ಬಿದ್ದಿದ ಜಿಂಕೆಯನ್ನು ಸೋಮವಾರಪೇಟೆ ಪಶುವೈದ್ಯಾಧಿಕಾರಿ ಡಾ. ನಾಗರಾಜ್ ಮರಣೋತ್ತರ ಪರೀಕ್ಷೆ ನೆಡೆಸಿದರು. ನಂತರ ಯಡವನಾಡು ಮೀಸಲು ಅರಣ್ಯ ಪ್ರದೇಶದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕುಶಾಲನಗರ ತಾಲ್ಲೂಕು ಪಶುವೈದ್ಯಾಧಿಕಾರಿ ಡಾ. ಸಂಜೀವ ಕುಮಾರ್ ಆರ್. ಶಿಂಧೆ, ಸ್ಥಳೀಯ ಜನಪ್ರತಿನಿಧಿಗಳು, ಹುದುಗೂರು ಉಪ ವಲಯ ಅರಣ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ವರ್ಗದವರು‌ ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!