ಕ್ರೀಡೆ

ಸೆ.20 ರಿಂದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಮಡಿಕೇರಿ ಸೆ.13:-ಪ್ರಸಕ್ತ(2024-25) ಸಾಲಿನಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯನ್ನು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದೆ.
ಮಡಿಕೇರಿ ತಾಲ್ಲೂಕಿನವರಿಗೆ ಸೆಪ್ಟೆಂಬರ್, 20 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ (ಹಾಕಿ ಆಯ್ಕೆಯನ್ನು ಸೆಪ್ಟೆಂಬರ್, 21 ರಂದು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯುವುದು) ಕ್ರೀಡಾಕೂಟ ನಡೆಯಲಿದೆ. ಕುಶಾಲನಗರ ತಾಲ್ಲೂಕಿನವರಿಗೆ ಸೆಪ್ಟೆಂಬರ್, 21 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ(ಮಡಿಕೇರಿ ಮತ್ತು ಕುಶಾಲನಗರ ಹಾಕಿ ಕ್ರೀಡಾಪಟುಗಳಿಗೆ ಹಾಕಿ ಆಯ್ಕೆ ಪ್ರಕ್ರಿಯೆಯು ಕೂಡಿಗೆ ಕ್ರೀಡಾಶಾಲೆ ಮೈದಾನದಲ್ಲಿ ನಡೆಯಲಿದೆ).
ಸೋಮವಾರಪೇಟೆ ತಾಲ್ಲೂಕಿನವರಿಗೆ ಸೆಪ್ಟೆಂಬರ್, 22 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನ (ಸೋಮವಾರಪೇಟೆಯ ಹಾಕಿ ಕ್ರೀಡಾಪಟುಗಳಿಗೆ ಹಾಕಿ ಆಯ್ಕೆ ಪ್ರಕ್ರಿಯೆಯು ಕ್ರೀಡಾ ಶಾಲೆ ಮೈದಾನ, ಕೂಡಿಗೆಯಲ್ಲಿ ನಡೆಯಲಿದೆ)ದಲ್ಲಿ ಕ್ರೀಡಾಕೂಟ ನಡೆಯಲಿದೆ.
ಪೊನ್ನಂಪೇಟೆ ತಾಲ್ಲೂಕಿನವರಿಗೆ ಸೆಪ್ಟೆಂಬರ್, 23 ರಂದು ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನ ಪೊನ್ನಂಪೇಟೆ(ಹಾಕಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ). ವಿರಾಜಪೇಟೆ ತಾಲ್ಲೂಕಿನವರಿಗೆ ಸೆಪ್ಟೆಂಬರ್, 24 ರಂದು ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜು ಆಟದ ಮೈದಾನ ಪೊನ್ನಂಪೇಟೆ (ಹಾಕಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ).
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್, 27 ರಂದು ಕೂಡಿಗೆ ಕ್ರೀಡಾ ಶಾಲೆ ಮೈದಾನದಲ್ಲಿ ನಡೆಯಲಿದೆ. (ಟೇಬಲ್ ಟೆನ್ನಿಸ್ ಮತ್ತು ಷಟಲ್ ಬ್ಯಾಡ್ಮಿಂಟನ್ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ).
ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ಮಡಿಕೇರಿ ತಾಲ್ಲೂಕು ಮಹಾಬಲ 9980887499, ಮನು 9480032712, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವೆಂಕಟೇಶ್ 9844326007 ಹಾಗೂ ಮಂಜುನಾಥ್ 9342563014, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕು ಸುಬ್ಬಯ್ಯ 8197790350 ಹಾಗೂ ಗಣಪತಿ 8951287301 ನ್ನು ಸಂಪರ್ಕಿಸಬಹುದು.
ಆಯಾಯ ತಾಲ್ಲೂಕಿನ ಕ್ರೀಡಾಪಟುಗಳು ತಮ್ಮ ತಾಲ್ಲೂಕಿನ ಕ್ರೀಡಾ ಕೂಟದಲ್ಲಿ ಮಾತ್ರ ಭಾಗವಹಿಸಬೇಕು. ಒಂದು ತಾಲ್ಲೂಕಿನಲ್ಲಿ ಭಾಗವಹಿಸಿದ ಕ್ರೀಡಾ ಪಟುಗಳಿಗೆ ಮತ್ತೊಂದು ತಾಲ್ಲೂಕಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹಾಗೆ ಕಂಡು ಬಂದಲ್ಲಿ ಅಂತಹ ತಂಡವನ್ನು ಅನರ್ಹಗೊಳಿಸಲಾಗುವುದು. ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಆಯಾಯ ದಿನದಂದು ಬೆಳಗ್ಗೆ 9.30 ರ ಒಳಗೆ ಕಡ್ಡಾಯವಾಗಿ ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ.
ಜಿಲ್ಲಾ ಮಟ್ಟದಲ್ಲಿ ಕಡ್ಡಾಯವಾಗಿ ಪಾಲಿಸಬೇಕಾದ ಸೂಚನೆ: ತಾಲ್ಲೂಕು ಮಟ್ಟದಲ್ಲಿ ನಡೆದ ಅಥ್ಲೆಟಿಕ್ಸ್(ವೈಯಕ್ತಿಕ ಸ್ಪರ್ಧೆ), ಪ್ರಥಮ ಸ್ಥಾನ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಮಾತ್ರ ಅವಕಾಶ. ಜಿಲ್ಲಾ ಮಟ್ಟಕ್ಕೆ ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ 2 ಭಾವಚಿತ್ರ ಕಡ್ಡಾಯವಾಗಿ ತರಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!