ಕಾರ್ಯಕ್ರಮ

ಕುಶಾಲನಗರದಲ್ಲಿ ಗೋಕುಲೋತ್ಸವ ಕಾರ್ಯಕ್ರಮ

ಕುಶಾಲನಗರ, ಸೆ 16: ಸನಾತನ ಹಿಂದೂ ಧರ್ಮ ಸಂರಕ್ಷಣೆ ಹಾಗೂ ಸಮಾಜದ ರಕ್ಷಣೆಯ ಚಿಂತನೆ ಪ್ರತಿಯೊಬ್ಬರ ಮನಸ್ಸಿನಿಂದ ಬರಬೇಕಾಗಿದೆ ಎಂದು ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕರು ಹಾಗೂ ರಂಗ ಮಂದಿರಂ ಮಾರ್ಗದರ್ಶಕರಾದ ರಮಣಶ್ರೀ ಗುರುಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಕುಶಾಲನಗರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಹಾಗೂ ಷಷ್ಟಿ ಪೂರ್ತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಗೋಕುಲೊತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಬ್ಬ ಹರಿದಿನಗಳ ಮೂಲಕ ಯುವ ಪೀಳಿಗೆಗೆ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲು ಸಾಧ್ಯ ಎಂದ ಅವರು, ಪ್ರತಿಯೊಬ್ಬ ಹಿಂದೂ ಕೂಡ ಹಿಂದುತ್ವದ ರಕ್ಷಣೆಗಾಗಿ ಒಗ್ಗಟ್ಟಾಗಬೇಕಾಗಿದೆ ಎಂದರು. ಹಿಂದು ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಮೇಶ್ ಮಾತನಾಡಿ ಧರ್ಮ ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ದೇವಾಲಯ ಒಕ್ಕೂಟ ಸಮಿತಿಯ ಸಹ ಕಾರ್ಯದರ್ಶಿ ಡಿ ವಿ ರಾಜೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ 70ಕ್ಕೂ ಅಧಿಕ ಪುಟಾಣಿಗಳು ಕೃಷ್ಣ ರಾಧೆ ವೇಷ ಧರಿಸಿ ಸಂಭ್ರಮಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಸಂತೋಷ್, ಜನಾರ್ಧನ್, ಮಧುಸೂದನ್ ನವ್ಯ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!