ಕುಶಾಲನಗರ, ಸೆ. 17 ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ತೆರಳುವ ರಸ್ತೆಯು ತೀರಾ ಹಾಳಾಗಿದ್ದ ಹಿನ್ನೆಲೆಯಲ್ಲಿ ಕುಶಾಲನಗರ ಪುರಸಭೆಯ 15ನೇ ಹಣಕಾಸು ಯೋಜನೆಯ ಅಡಿಯಲ್ಲಿ ರೂ.25 ಲಕ್ಷ ವೆಚ್ಚದ ರಸ್ತೆ ದುರಸ್ಥಿ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಭುವನಗಿರಿ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿಯನ್ನು ಆರಂಭ ಮಾಡಲಾಗಿದೆ. ಇದರ ಜೊತೆಯಲ್ಲಿ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಿಂದ ಸಾರ್ವಜನಿಕರಿಗೆ, ಸ್ಥಳೀಯ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಘಟಕದಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಅಧುನಿಕ ತಂತ್ರಜ್ಞಾನ ಯಂತ್ರಗಳ ಅಳವಡಿಕೆಗೆ ಈಗಾಗಲೇ ಸಂಬಂಧಿಸಿದ ಇಲಾಖೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆಯ ಸದಸ್ಯರುಗಳಾದ ಸುರೇಶ್, ಸುರಯಭಾನು, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಅನಂತ್, ಟಿ.ಪಿ.ಹಮೀದ್, ಚಂದ್ರು, ಸಹಕಾರ ಸಂಘದ ನಿರ್ದೇಶಕ ರಮೇಶ್, ಪುರಸಭೆಯ ಇಂಜಿನಿಯರ್ ರಂಗರಾಮ್, ಕೆ.ಪಿ.ಸಿ ಸಿ ಸದಸ್ಯ ನಟೇಶ್ ಗೌಡ, ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಗ್ರಾಮದ ಪ್ರಮುಖರು ಹಾಜರಿದ್ದರು.
Back to top button
error: Content is protected !!