ಟ್ರೆಂಡಿಂಗ್

ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

ಸಕಾಲದಲ್ಲಿ ಸಾಲ ಮರುಪಾವತಿಸಿ ಸಂಘದ ಅಭಿವೃದ್ದಿಗೆ ಸಹಕರಿಸಲು ಅಧ್ಯಕ್ಷ ಹೇಮಂತ್ ಮನವಿ

ಕುಶಾಲನಗರ, ಸೆ. 22: ಕೂಡಿಗೆಯಲ್ಲಿರುವ ರಾಮೇಶ್ವರ ಕೂಡುಮಂಗಳೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023- 24ನೇ ಸಾಲಿನಲ್ಲಿ ರೈತರಿಗೆ ಕೃಷಿ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ವ್ಯವಹಾರ ನಡೆಸಿ 75.60 ಲಕ್ಷ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ತಿಳಿಸಿದರು.

ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಘದ ವ್ಯಾಪ್ತಿಯಲ್ಲಿ 18 ಗ್ರಾಮಗಳಿದ್ದು, ಅದರಲ್ಲಿ ಎಲ್ಲಾ ಗ್ರಾಮಗಳು ಒಳಗೊಂಡಂತೆ 2023-24 ಸಾಲಿನಲ್ಲಿ 4228 ಮಂದಿ ಸದಸ್ಯತ್ವವನ್ನು ಹೊಂದಲಾಗಿದೆ.
ಕೃಷಿ ಮತ್ತು ಕೃಷಿಯೇತರ ಮತ್ತು ಇತರೆ ವ್ಯಾಪಾರ ವಹಿವಾಟುಗಳಿಂದ ಒಟ್ಟಾಗಿ ಸಂಘವು 147.40 ಕೋಟಿ ವಹಿವಾಟು ನಡೆಸಿ 75.60 ಲಕ್ಷ ಲಾಭಾಂಶ ಗಳಿಸಿದೆ. ಸಂಘದ 15 ವರ್ಷಗಳ ಇತಿಹಾಸದಲ್ಲಿಯೇ ಇದು ದೊಡ್ಡ ಮಟ್ಟದ ಲಾಭ ಎಂದು ಹರ್ಷ ವ್ಯಕ್ತಪಡಿಸಿದರು.
ಉತ್ತಮ ಕಾರ್ಯನಿರ್ವಹಣೆಗೆ
ಈ ಸಾಲಿನಲ್ಲಿ ಕೂಡ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್ ಕೊಡಮಾಡುವ ಪುರಸ್ಕಾರಕ್ಕೆ ಕೂಡ ಸಂಘ ಭಾಜನವಾಗಿದೆ ಎಂದು ತಿಳಿಸಿದರು.
ಸಂಘವು ಕಳೆದ ಸಾಲಿನಂತೆಯೇ ಈ ಸಾಲಿನಲ್ಲಿಯು ಆಡಿಟ್ ಗ್ರೇಡ್ ನಲ್ಲಿ ” ಎ” ತರಗತಿಯನ್ನು ಹೊಂದಿದೆ ಎಂದು ತಿಳಿಸಿದರು.
ಸಂಘವು ಮುಂದಿನ ದಿನಗಳಲ್ಲಿ ರೈತರ ಅಭಿವೃದ್ಧಿಗೆ ಪೂರಕವಾದ ಹೊಸ ಯೋಜನೆಗಳನ್ನು ಹಮ್ಮಿಕೊಂಡು ರೈತರ ದಾಖಲೆಯ ಅನುಗುಣವಾಗಿ ಅಭಿವೃದ್ಧಿಗೆ ಹೊಸ ಸಾಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕೆ.ಕೆ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಸಭೆಯಲ್ಲಿ
ಮೃತಪಟ್ಟ ಸದಸ್ಯರಿಗೆ ಸಂತಾಪ ಸೂಚಿಸಿ, ಸಂಘದ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಹಿಂದಿನ ಸಾಲಿನ ವಾರ್ಷಿಕ ವರದಿ ಓದಿ ದಾಖಲು‌ ಮಾಡಲಾಯಿತು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ವಿ.ಬಸಪ್ಪ ಸೇರಿದಂತೆ ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮೀನಾ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!