ಕುಶಾಲನಗರ, ಸೆ 30 : ಇತಿಹಾಸ ಉಪನ್ಯಾಸಕರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.ವಿದ್ಯಾರ್ಥಿಗಳು ನಿಮ್ಮ ಜ್ಞಾನಕ್ಕೆ ಮನಸೋತು ನಿಮ್ಮನ್ನು ಅಪೇಕ್ಷಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕೆ ಕೆ.ಮಂಜುಳಾ ಹೇಳಿದರು.
ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಪಿಯು ಕಾಲೇಜು ಇತಿಹಾಸ ವೇದಿಕೆ ಸಹಯೋಗದಲ್ಲಿ ಇಲ್ಲಿನ
ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಇತಿಹಾಸ ಕಾರ್ಯಗಾರ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯ ಗುಣಮಟ್ಟವನ್ನು ಉತ್ತಮಪಡಿಸುವ ಸಲುವಾಗಿ ಪ್ರಶ್ನೆ ಪತ್ರಿಕೆಗಳಲ್ಲಿ ಬಹಳಷ್ಟು ಬದಲಾವಣೆಗಳನ್ನು ತರಲಾಗುತ್ತಿದೆ.ಹಾಗಾಗಿ ಇಂತಹ ಕಾರ್ಯಗಾರಗಳು ಉಪನ್ಯಾಸಕರಿಗೆ ತುಂಬ ಉಪಯುಕ್ತವಾಗಿವೆ ಎಂದ ಅವರು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣವನ್ನು ಉಂಟು ಮಾಡಿ ಅವರ ಮನಸ್ಸನ್ನು ಬಲವಂತವಾಗಿ ಗೆಲ್ಲಬೇಡಿ, ಪ್ರೀತಿಯಿಂದ ಅವರ ಮನಸ್ಸನ್ನು ಗೆಲ್ಲುವಂತೆ ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿ ಡಾ,ಮಮತಾ ಮಾತನಾಡಿ, ಇಲಾಖೆಯು ಒದಗಿಸಿರುವ ಮೂರು ಮಾದರಿ ಪ್ರಶ್ನೆ ಪತ್ರಿಕೆಗಳ ವಿವರಗಳ ಬಗ್ಗೆ ಮಾಹಿತಿ ನೀಡಿದರು.
ಕನ್ನಡ ಭಾರತಿ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಬಿ.ಜೈವರ್ಧನ್ ಮಾತನಾಡಿ, ಈ ಕಾರ್ಯಗಾರ ನಮ್ಮ ಸಂಸ್ಥೆಯಲ್ಲಿ ನಡೆಯುತ್ತಿರುವುದು ನನಗೆ ಖುಷಿ ಕೊಟ್ಟಿದೆ ಕೊಡಗಿನ ಇತಿಹಾಸ ವಸ್ತುನಿಷ್ಠವಾಗಿ ಅಧ್ಯಯನ ಆಗಬೇಕಿದೆ ಎಂದರು.
ಇತಿಹಾಸ ವೇದಿಕೆಯ ಅಧ್ಯಕ್ಷರಾದ ಹಂಡ್ರಂಗಿ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ,ಸೋಮವಾರಪೇಟೆಯ ನಿವೃತ್ತ ಉಪನ್ಯಾಸಕಿ ತಿಲೋತ್ತಮೆ, ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಂದ್ರ ಸ್ವಾಮಿ ಪಾಲ್ಗೊಂಡಿದ್ದರು.
ಇದೇ ವೇಳೆ ಶೇಕಡ 100 ಫಲಿತಾಂಶ ಪಡೆದ 22 ಕಾಲೇಜಿನ ಇತಿಹಾಸ ಉಪನ್ಯಾಸಕರಿಗರ ಸನ್ಮಾನಿಸಲಾಯಿತು. ಇತಿಹಾಸ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ಆರು ವಿದ್ಯಾರ್ಥಿಗಳಿಗೆ ಒಂದು ಸಾವಿರ ನಗದು ಬಹುಮಾನ ಹಾಗೂ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು. ಉಪನಿರ್ದೇಶಕಿ ಕೆ.ಮಂಜುಳಾ ಅವರನ್ನು ಸನ್ಮಾನಿಸಲಾಯಿತು.ಇತಿಹಾಸ ಉಪನ್ಯಾಸಕರಾದ ಶಾಂತಿ ಸ್ವಾಗತಿಸಿದರು. ಕೆ.ಎಸ್. ಶ್ವೇತಾ ನಿರೂಪಿಸಿದರು.ಕೃಷ್ಣ ವಂದಿಸಿದರು.
Back to top button
error: Content is protected !!