ಸುದ್ದಿಗೋಷ್ಠಿ

ಕರ್ನಾಟಕ ಚಾಲಕರ ಒಕ್ಕೂಟದಿಂದ 2ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ

ಕುಶಾಲನಗರ, ಅ 15: ಕರ್ನಾಟಕ ಚಾಲಕರ ಒಕ್ಕೂಟದ ಕುಶಾಲನಗರ ತಾಲೂಕು ಘಟಕದ ವತಿಯಿಂದ 2ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 16 ರಂದು ಶನಿವಾರ ಕುಶಾಲನಗರದ ಕಾರು ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ತಾಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಚಾಲಕರ ಒಕ್ಕೂಟದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷ ಜಿ.ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ ಬೈಚನಹಳ್ಳಿಯ ಮಾರಮ್ಮ ದೇವಾಲಯದಿಂದ ಕನ್ನಡಾಂಭೆಯ ಮೆರವಣಿಗೆ ನಡೆಯಲಿದೆ. ಕೊಡಗು ಗಡಿ ಕಾವೇರಿ ಪ್ರತಿಮೆವರೆಗೆ ಮೆರವಣಿಗೆ ಸಾಗಿ ನಂತರ ಸಭಾ ವೇದಿಕೆಯ ಬಳಿ ಸಮಾಪ್ತಿಗೊಳ್ಳಲಿದೆ. ನಂತರ ಕಾರು ನಿಲ್ದಾಣದಲ್ಲಿ ಧ್ವಜಾರೋಹಣ ಮೂಲಕ ಸಭಾ ಕಾರ್ಯಕ್ರಮ ನಡೆಸಿ ಮಧ್ಯಾಹ್ನ ಅನ್ನಸಂತರ್ಪಣೆ ಬಳಿಕ 3 ಗಂಟೆ ಚಿಕ್ಕ ಮಕ್ಕಳಿಂದ ನೃತ್ಯ ಪ್ರದರ್ಶನ ಸಂಜೆ 6 ಗಂಟೆಗೆ ಕುಶಾಲನಗರದ ನೃತ್ಯ ಶಾಲೆಗಳಿಂದ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. ವಿಜೇತರಿಗೆ ಕ್ರಮವಾಗಿ ರೂ 10,001, 7001, 5001 ಪ್ರಥಮ, ದ್ವಿತೀಯ, ತೃತೀಯ ನಗದು ಹಾಗೂ ಟ್ರೋಫಿ ಬಹುಮಾನ ವಿತರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ವಾಹನ ಅಲಂಕಾರ ಮಾಡಿದವರಿಗೆ ಪ್ರತ್ಯೇಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷ ಮುಜೀಬ್ ಮಾತನಾಡಿ, ಎರಡನೇ ವರ್ಷದ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಪೂರ್ಣ ಒಕ್ಕೂಟದ ವತಿಯಿಂದಲೇ ದೇಣಿಗೆ ಸಂಗ್ರಹಿಸಿ ಆಚರಿಸುತ್ತಿದ್ದು ಸ್ಥಳೀಯ ಕಾರು ನಿಲ್ದಾಣ ಸಂಘದ ಹೆಸರನ್ನು ಇದಕ್ಕೆ ಬಳಸಿಕೊಳ್ಳುತ್ತಿಲ್ಲ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು.

ತಾಲೂಕು
ಪ್ರಚಾರ ಸಮಿತಿ ಅಧ್ಯಕ್ಷ ಆನಂದ್ ಮಾತನಾಡಿ, ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಕೇವಲ ನಮ್ಮ ಸಂಘದ ಸದಸ್ಯರ ಮಕ್ಕಳಿಗೆ ಮಾತ್ರ ಸೀಮಿತಗೊಳಿಸಿಲ್ಲ. ಎಲ್ಲಾ ಚಾಲಕರ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್, ಕಾರ್ಯದರ್ಶಿ ಕುಮಾರ್, ಪ್ರಚಾರ ಸಮಿತಿ ಉಪಾಧ್ಯಕ್ಷ ಯೋಗೇಶ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!