ಶಿಕ್ಷಣ

ಮುಳ್ಳುಸೋಗೆ ಸರಕಾರಿ ಶಾಲೆಗೆ ಪುಸ್ತಕ ವಿತರಣೆ

ಮುಳ್ಳುಸೋಗೆ ಗ್ರಾಪಂ ಮೂಲಕ ಸರಕಾರಿ ಶಾಲೆಗಳಿಗೆ ಕೊಡುಗೆ

ಕುಶಾಲನಗರ, ಜು 20: ಮುಳ್ಳಸೋಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ, ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಗ್ರಾಮ ಪಂಚಾಯತ್ ವತಿಯಿಂದ ವಿತರಿಸಲಾಯಿತು.
ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ಗ್ರಾಪಂ ಅಧ್ಯಕ್ಷ ಬಿ.ಕೆ. ಚೆಲುವರಾಜು, ಗ್ರಾಮ ಪಂಚಾಯಿತಿಯು ಕೇವಲ ಅಭಿವೃದಿ ಕಾಮಗಾರಿಗಳನ್ನು ಅಷ್ಟೇ ಮಾಡದೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಪೂರಕವಾಗುವಂತಹ ಮತ್ತು ಮೂಲಭೂತ ಸೌಲಭ್ಯಗಳು ಒದಗಿಸುವತ್ತ ಗಮನಹರಿಸುವುದು ಅಗತ್ಯವಿದೆ. ಮುಂದಿನ ಪೀಳಿಗೆಗಳನ್ನು ಬೆಳೆಸುವ ಕಾರ್ಯ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಆಡಳಿತ ಮಂಡಳಿಯ ಸರ್ವ ಸದಸ್ಯರ ಸಹಕಾರದಿಂದ ಈ ಒಂದು ಮಹತ್ವಾಕಾಂಕ್ಷೆ ಯೋಜನೆಯನ್ನು ಹಮ್ಮಿಕೊಂಡಿದ್ದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
ಗ್ರಾಪಂ ಸದಸ್ಯರಾದ ಶಿವಾನಂದ ಮಾತನಾಡಿ, ಗ್ರಾಮ ಪಂಚಾಯಿತಿಯು ಕಲಿಯುವ ಮಕ್ಕಳಿಗೆ ಆಸರೆಯಾಗಿ ನಿಂತಿರುವುದು ಹೆಮ್ಮೆಯ ವಿಚಾರ ಪ್ರತಿ ಶಾಲೆಗೆ ಅಂದಾಜು ರೂ 30 ಸಾವಿರ ಗಳಷ್ಟು ಮೌಲ್ಯದ ಲೇಖನ ಸಾಮಗ್ರಿಗಳು ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಲಾಗುತ್ತಿದ್ದು ಮಕ್ಕಳಿಗೆ ಅವಶ್ಯಕತೆ ಇದ್ದಲ್ಲಿ ಇನ್ನು ಹೆಚ್ಚಿನ ಸೌಲಭ್ಯವನ್ನು ಗ್ರಾಮ ಪಂಚಾಯಿತಿಯಿಂದ ವಿತರಿಸಲು ಬದ್ದರಿದ್ದೇವೆ ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಮ್ಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್, ವಾರ್ಡ್ ಸದಸ್ಯರುಗಳಾದ ಮುರುಳಿ, ರಮೇಶ್, ಶಿವಾನಂದ್, ಪಾರ್ವತಿ ಚಿತ್ರಕಲ, ಪದ್ಮಾವತಿ ಶಾಲಾ ಮುಖ್ಯೋಪಾಧ್ಯಾಯಿನಿ ಭಾಗ್ಯ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು.
ಶಿಕ್ಷಕರಾದ ಶಿವಲಿಂಗು ಸರ್ವರನ್ನು ಸಭೆಗೆ ಸ್ವಾಗತಿಸಿ ಗ್ರಾಮ ಪಂಚಾಯಿತಿಗೆ ಧನ್ಯವಾದ ಅರ್ಪಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!