ಆರೋಗ್ಯ

ಜನತಾ ಕಾಲೋನಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ನೇತ್ರ ತಪಾಸಣಾ ಶಿಬಿರ

ಕುಶಾಲನಗರ, ಅ 29; ವಿಷನ್ ಸ್ಪ್ರಿಂಗ್ ವತಿಯಿಂದ ಕುಶಾಲನಗರದ ಪುರಸಭೆ ನಾಮ ನಿರ್ದೇಶಿತ ಸದಸ್ಯ ನವೀನ್ ಗೌಡ ಸಹಕಾರದಲ್ಲಿ ಜನತಾ ಕಾಲೋನಿಯ ಮಹಿಳಾ ಸಮಾಜದ ಸಭಾಂಗಣದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಹಾಗೂ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಡಾ. ಮಂತರ್ ಗೌಡ ಶಿಬಿರಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಪುರಸಭೆ ನಾಮ ನಿರ್ದೇಶಿತ ಸದಸ್ಯ ನವೀನ್ ಗೌಡ, ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಜನತಾ ಕಾಲೋನಿಯಲ್ಲಿ ಉಚಿತ ಆರೋಗ್ಯ ಶಿಬಿರ ಹಾಗೂ ನೇತ್ರ ತಪಾಸಣಾ ಶಿಬಿರ ಏರ್ಪಡಿಸಲಾಗಿದ್ದು. ಇಂತಹ ಉಚಿತ ಶಿಬಿರಗಳ ಮೂಲಕ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ.
ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿಯನ್ನು ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ. ಪ್ರತಿಯೊಬ್ಬರೂ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದರು.
200 ಕ್ಕೂ ಅಧಿಕ ಮಂದಿ ಉಚಿತ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಂಡರು.
ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕಾಂಗ್ರೆಸ್ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಉಪಾಧ್ಯಕ್ಷೆ ಪುಟ್ಟಲಕ್ಷ್ಮಮ್ಮ, ಸ್ಥಳಿಯರಾದ ಆನಂದ್, ಸ್ವರೂಪ್, ವಿನಯ್, ಗಯಾಜ್, ಜನತಕಾಲೋನಿ ಅಂಗನವಾಡಿ ಕಾರ್ಯಕರ್ತೆ ನೀಲಮ್ಮ, ಆಶಾ ಕಾರ್ಯಕರ್ತೆಯರಾದ ಗೀತಾ, ಸರಸ್ವತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!