ಕುಶಾಲನಗರ,ನ೮: ಕೊಡಗಿನಲ್ಲಿ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಬಾಳುತ್ತಿದ್ದು, ಕೆಲವರು ಮುಸ್ಲಿಂ ಸಮುದಾಯದ ಮೇಲೆ ಆರೋಪವನ್ನು ಹೊರಿಸುವ ಮೂಲಕ ಧರ್ಮಗಳ ನಡುವೆ ಕಂದಕವನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಆಗ್ರಹಿಸಿದ್ದಾರೆ.
ಕುಶಾಲನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಕುಶಾಲನಗರದ ಮಹಿಳೆಯೋರ್ವರ ಮನೆಗೆ ಅಪರಿಚಿತರಿಬ್ಬರು ಮನೆಗೆ ಭೇಟಿ ನೀಡಿ ವಕ್ಫ್್ ಆಸ್ತಿ ಎಂದು ಹೇಳಿ, ಮನೆ ಕಾಲಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ಪೊಲೀಸ್ ದೂರು ನೀಡಿದ್ದಾರೆ. ಈ ಬಗ್ಗೆ ಕೆಲವು ಪತ್ರಿಕೆ,ಮಾಧ್ಯಮಗಳಲ್ಲಿ ಮುಸ್ಲಿಂ ಗುಂಪು ಎಂದು ಪ್ರಸಾರ ಮಾಡಲಾಗಿದೆ. ಯಾರೋ ಅಪರಿಚಿತರು ಮಾಡಿದ ಕೆಲಸಕ್ಕೆ ಮುಸ್ಲಿಂ ಸಮುದಾಯದ ಹೆಸರನ್ನು ಎಳೆದು ತರುವುದು ಸರಿಯಲ್ಲ ಎಂದು ಅವರು, ಇಂತಹ ವಿಷಯಗಳ ಬಗ್ಗೆ ಪತ್ರಿಕೆ ಮಾಧ್ಯಮಗಳಲ್ಲಿ ಪ್ರಸಾರ ಮಾಡುವಾಗ ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಪ್ರಶ್ನಿಸಲು ಸರ್ಕಾರವಿದೆ. ಯಾರೋ ಅಪರಿಚಿತರು ಬಂದು ಮನೆ ಕಾಲಿ ಮಾಡಿ ಎಂದು ಹೇಳಿದ್ದಾರೆ ಎಂದು ಮನೆ ಕಾಲಿ ಮಾಡಲು ಸಾಧ್ಯವೇ? ಇದರ ಬಗ್ಗೆ ಪೊಲೀಸರ ತನಿಖೆಯ ನಂತರ ಸತ್ಯಾಸತ್ಯತೆ ಬಯಲಿಗೆ ಬರಲಿದೆ. ತಪ್ಪು ಮಾಡುವವರು ಯಾವುದೇ ಧರ್ಮದವರಾಗಿರಲಿ. ಅದರಲ್ಲಿ ಧರ್ಮವನ್ನು ಎಳೆದು ತರಬಾರದು. ಇದರಿಂದ ಸಾಮರಸ್ಯ ಕದಡಲಿದೆ. ಆದ್ದರಿಂದ ಸಂಬಂಧಿಸಿದ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿ, ಶಾಂತಿಯ ನಾಡು ಕೊಡಗಿನಲ್ಲಿ ಸೌಹಾರ್ದತೆಯಿಂದ ಬಾಳಲು ಅವಕಾಶ ಮಾಡಿಕೊಡಬೇಕು ಎಂದು ಕೆ.ಬಿ.ಶಂಶುದ್ಧೀನ್ ಆಗ್ರಹಿಸಿದ್ದಾರೆ.
Back to top button
error: Content is protected !!