ಪ್ರಕಟಣೆ

ಸಮಾಜದ ಸ್ವಾಸ್ಥ್ಯ ಕೆಡಿಸುವವರ‌ ವಿರುದ್ಧ ಕಟ್ಟುನಿಟ್ಟಿನ ಕ್ರಮ ಅಗತ್ಯ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್ ಆಗ್ರಹ

ಕುಶಾಲನಗರ, ನ 9:: ಸ್ವಾಸ್ಥ್ಯ ಸಮಾಜದಲ್ಲಿ ಒಡಕನ್ನು ತರುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಆಗ್ರಹಿಸಿದ್ದಾರೆ.
ಕುಶಾಲನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ವಕ್ಪ್ ಆಸ್ತಿಯೆಂದು ಅಪರಿಚಿತರು ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬಂದಿದೆ.‌ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿದ ಈ ಪ್ರಯತ್ನ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಕುಶಾಲನಗರ ಪೊಲೀಸರ ಕಾರ್ಯ ಶ್ಲಾಘನೀಯ ಎಂದರು.
ಇಂತಹ ಕೃತ್ಯಗಳನ್ನು ಎಸಗಿ ಸಮಾಜದ ಸ್ವಾಸ್ಥ್ಯ ಹಾಳು‌ಮಾಡುವವರು ಯಾರೇ ಆಗಲಿ, ಅಂತಹ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಾನೂನು ಜರುಗಿಸಬೇಕು ಎಂದ ಅವರು, ಸತ್ಯಾಸತ್ಯತೆಯನ್ನು ಅರಿಯದೆ ಕೆಲವು ಪತ್ರಕರ್ತರು ಕೂಡಾ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದಾರೆ. ಕೆಲವರು ಮಾಡುವ ತಪ್ಪಿನಿಂದ ಪತ್ರಿಕೋದ್ಯಮದ ಮೇಲೆ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಇಂತಹ ತಪ್ಪುಗಳು ಆಗದಂತೆ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕು ಎಂದು ಕೆ.ಬಿ.ಶಂಶುದ್ಧೀನ್ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!