ಕಾರ್ಯಕ್ರಮ

ಕುಶಾಲನಗರದಲ್ಲಿ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಆಚರಣೆ

ಕುಶಾಲನಗರ, ನ 18:ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಪಂ ಹಾಗೂ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಆಚರಿಸಲಾಯಿತು.

ಕುಶಾಲನಗರದ ಕಲಾಭವನದಲ್ಲಿ‌ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವ ಪೀಳಿಗೆ ಸಮಾಜಮುಖಿ‌ ಚಿಂತನೆಗಳನ್ನು ಹೊಂದುವುದು‌ ಅವಶ್ಯಕವಾಗಿದೆ. ಜಾತಿ,‌ಮತ, ಮೇಲು, ಕೀಳು ಭಾವನೆ ತೊಡೆದುಹಾಕಲು, ಸಾಮರಸ್ಯದಿಂದ ಸಹಬಾಳ್ವೆ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಚಿಂತನೆ ಹರಿಸಬೇಕಿದೆ ಎಂದರು.
ನಿವೃತ್ತ ಪ್ರಾಂಶುಪಾಲ, ಸಾಹಿತಿ ಡಾ.ಸೋಮಣ್ಣ ಮುಖ್ಯ‌ ಭಾಷಣ ಮಾಡಿದರು. ನಮ್ಮ ಸಮಾಜದಲ್ಲಿ ಬೇರೂರಿರುವ
ಮೌಢ್ಯತೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಬೇಕು.
ಸಮಾಜ ಸುಧಾರಕ, ಮಹಾ ಮಾನವತಾವಾದಿ, ದಾರ್ಶನಿಕ, ದೊಡ್ಡ ವ್ಯಾಕಾರಣ ವಿದ್ವಾಂಸರು, ಶ್ರೇಷ್ಠ ಕವಿಯಾದ
ಕನಕದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಚಿಂತನೆ ಮತ್ತು ವೈಚಾರಿಕತೆ ಇದೆ.ಸಮಾಜದ ಸಮಾನತೆಗೆ ಹೋರಾಡಿದ ಕನಕದಾಸರು ದಾಸ ಶ್ರೇಷ್ಠರು ಎಂದು ಬಣ್ಣಿಸಿದರು.

ಜಿಲ್ಲಾಧಿಕಾರಿ ವೆಂಕಟರಾಜ್, ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ.ಶಶಿಧರ್, ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಡಿ.ಆರ್.ಪ್ರಭಾಕರ್, ಕರ್ನಾಟಕ ಕುರುಬ ಸಂಘದ ಕೊಡಗು ಜಿಲ್ಲಾ ನಿರ್ದೇಶಕಿ ಹೇಮಲತಾ ಮಂಜುನಾಥ್ ಮಾತನಾಡಿದರು.
ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜಿಸಿ ನಮನ‌ ಸಲ್ಲಿಸಲಾಯಿತು.
ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಕೂಡ
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಬುಡಕಟ್ಟು ಜನಾಂಗದ ನಾಲ್ವರು ವಿದ್ಯಾರ್ಥಿಗಳು, ಸಮುದಾಯ 10 ಕ್ಕೂ ಅಧಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಸಮಾಜದ ಏಳಿಗೆಗೆ ಶ್ರಮಿಸಿದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕನಕ‌ಜಯಂತಿ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ, ಸದಸ್ಯೆ ಜಯಲಕ್ಷ್ಮಮ್ಮ ನಂಜುಂಡಸ್ವಾಮಿ, ಕುಶಾಲನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಮೋದ್ ಮುತ್ತಪ್ಪ,
ಸೋಮವಾರಪೇಟೆ ಪಪಂ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ,
ಕಾಗಿನೆಲೆ ಕನಕಗುರು ಪೀಠದ ಧರ್ಮದರ್ಶಿ ಎಂ.ನಂಜುಂಡಸ್ವಾಮಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಟಿ.ಕೆ.ವಸಂತ, ಮುಖ್ಯಾಧಿಕಾರಿಗಳಾದ ಕೃಷ್ಣಪ್ರಸಾದ್, ಪಿ.ಕೆ.ನಾಚಪ್ಪ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಸ್ವಾಮಿ, ಸಮಾಜದ ಮುಖಂಡರಾದ ಸಿ.ಕೆ.ಉದಯಕುಮಾರ್, ದೊಡ್ಡಯ್ಯ, ಧರ್ಮ, ನಟೇಶ್, ಗಣೇಶ್, ಮೊಗಣ್ಣ, ಪುಟ್ಟಸ್ವಾಮಿ, ದಲಿತ ಮುಖಂಡರಾದ ರಾಜು, ಗಂಗಾಧರ್, ಜಯಪ್ಪ ಹಾನಗಲ್ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!