ಕುಶಾಲನಗರ, ಡಿ 11:ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೈತಭವನದಲ್ಲಿ ನಳಿನಿ ಎಂಬುವವರು ದಿನಾಂಕ: 28-11-2024 ರಂದು ಅವರ ಮಗಳ ಮದುವೆಯ ಶಾಸ್ತ್ರ ನಡೆಯುವ ಸಂದರ್ಭ ವಧುವಿನ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್ನಿಂದ ಅಂದಾಜು 28 ಗ್ರಾಂ ತೂಕದ ಚಿನ್ನಾಭರಣಗಳನ್ನು ಮತ್ತು ರೂ. 5000/- ನಗದನ್ನು ಕಳವು ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.
ಸದರಿ ಪ್ರಕರಣದ ಘಟನೆ ಸ್ಥಳಕ್ಕೆ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಯನ್ನು ಪತ್ತೆ ಹಚ್ಚಲು ಆರ್.ವಿ ಗಂಗಾಧರಪ್ಪ, ಡಿಎಸ್ಪಿ, ಸೋಮವಾರಪೇಟೆ ಉಪವಿಭಾಗ, ಪ್ರಕಾಶ್.ಬಿ.ಜಿ, ಪಿಐ, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ, ಹೆಚ್.ಟಿ.ಗೀತಾ, ಪಿಎಸ್ಐ, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ & ಠಾಣಾ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 10-12-2024 ರಂದು ತೊರೆನೂರು ಗ್ರಾಮ ನಿವಾಸಿಯಾದ ಚರಣ್ ಕುಮಾರ್, 19 ವರ್ಷ, ಗೋಣಿಮರೂರು ಗ್ರಾಮ ನಿವಾಸಿಯಾದ ನಿತೀನ್.ಎಸ್.ಎಲ್. 22 ವರ್ಷ ಹಾಗೂ ತೊರೆನೂರು ಗ್ರಾಮ ಆರಿಶಿನಕುಪ್ಪೆ ನಿವಾಸಿಯಾದ ಮಿಥುನ್, 24 ವರ್ಷ ಎಂಬುವವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿರುತ್ತದೆ ಹಾಗೂ ಕಳವು ಮಾಡಿದ್ದ 28 ಗ್ರಾಂ ತೂಕದ ಚಿನ್ನಾಭರಣಗಳನ್ನು & ರೂ.5,000/- ನಗದನ್ನು ಮತ್ತು ಕೃತ್ಯಕ್ಕೆ ಬಳಸಿದ ದ್ವಿ’ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
Back to top button
error: Content is protected !!