ಕುಶಾಲನಗರ, ಜ. 9: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ನವರ ನೇತ್ರತ್ವದಲ್ಲಿ ಬೆಂಗಳೂರಿನಲ್ಲಿ ರಾಜ್ಯದ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ನವರನ್ನು ಕುಶಾಲನಗರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.
ಮಾಜಿ ಮುಖ್ಯ ಮಂತ್ರಿ ವೀರೇಂದ್ರ ಪಾಟೀಲ್ ನವರ ಜನ್ಮ ಶತಮಾನೋತ್ಸವ, ಹಾಗೂ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ನವರ ನುಡಿ ನಮನ ಕಾರ್ಯಕ್ರಮ ಅಗಮಿಸುವಂತೆ ಶಾಸಕರ ನೇತ್ರತ್ವದಲ್ಲಿ ಭೇಟಿ ಮಾಡಿ ಆಹ್ವಾನ ಸಲ್ಲಿಸಿದರು.
ನಂತರ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ಶಾಸಕರ ನೇತ್ರತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸುರಾಜ್ ನವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.
ಈ ಸಂದರ್ಭದಲ್ಲಿ ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ ಅಧ್ಯಕ್ಷ ಬಿ.ಎಸ್ .ಲೋಕೇಶ್ ಸಾಗರ್, ಸ್ನೇಹ ಬಳಗ ಪ್ರಮುಖರಾದ ಕೆ.ಕೆ. ನಾಗರಾಜಶೆಟ್ಟ, ಟಿ.ಕೆ.ಪಾಂಡುರಂಗ, ಬಿ.ಡಿ.ಅಣ್ಣಯ್ಯ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.
Back to top button
error: Content is protected !!