ಕುಶಾಲನಗರ, ಜ 14: ಇಲ್ಲಿಗೆ ಸಮೀಪದ ಯಡನವಾಡು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ ಘಟನೆ ನಡೆದಿದೆ.
ಕೂಪೆ ಹಾಡಿಯ ತಾಮ್ಮು(68) ಮೃತ ದುರ್ದೈವಿ
ಯಡನವಾಡು ಮೀಸಲು ಅರಣ್ಯ ಸಮೀಪದ ಕೂಪೆ ಹಾಡಿಯ ತಮ್ಮು ಕಳೆದ ಭಾನುವಾರದಿಂದ ಕಾಣೆಯಾಗಿದ್ದರು. ತಮ್ಮು ತಾನು ಸಾಕಿದ ಆಡು ಗಳನ್ನು ಕಾಡಿನಂಚಿನಲ್ಲಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸೋಮವಾರಪೇಟೆ ಎ. ಸಿ. ಎಫ್. ಗೋಪಾಲ್, ವಲಯ ಅರಣ್ಯಾಧಿಕಾರಿ ಶೈಲೇಂದ್ರ, ಹುದುಗೂರು ಉಪ ವಲಯ ಅರಣ್ಯಾಧಿಕಾರಿ ಚಂದ್ರೇಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲಿಸಿದರು. ಸ್ಥಳದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ನೀಡಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Back to top button
error: Content is protected !!