ಕುಶಾಲನಗರ, ಜ 19: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉತ್ತಮ ಸಾಧನೆ ಹಿನ್ನಲೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಜ್ಯ ಸಂಘ ಮೂಲಕ ನೀಡಲಾಗುವ ಉತ್ತಮ ಸಾಧನೆ ಮಾಡಿರುವ ತಾಲೂಕು ಹಾಗೂ ಜಿಲ್ಲಾ ಸಂಘಗಳಿಗೆ ವಾರ್ಷಿಕ ಪ್ರಶಸ್ತಿಗಳು ಘೋಷಣೆಯಾಗಿತ್ತು.
ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಶಾಲನಗರ ತಾಲೂಕು ಸಂಘ ಸ್ಥಾಪನೆಯಾಗಿ ಮೂರು ವರ್ಷಗಳು ಕಳೆದಿದ್ದು, 2024 ನೇ ಸಾಲಿನಲ್ಲಿ ಡಿಸೆಂಬರ್ ಅಂತ್ಯ ತನಕ ಸಂಘದ ಆಶ್ರಯದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ 60ಕ್ಕೂ ಅಧಿಕ ಚಟುವಟಿಕೆಗಳನ್ನು ನಡೆಸಿದ್ದು ಈ ನಡುವೆ ಹೋಬಳಿ ಸಂಘದ ಬೆಳ್ಳಿ ಹಬ್ಬವನ್ನು ಕೂಡ ಆಚರಿಸಿತ್ತು.