ಆರೋಪ

ವಿವಿಧಹಣಕಾಸು ಸಂಸ್ಥೆಯಿಂದ ಸಾಲ ಪಡೆದು ಮರುಪಾವತಿಸಲಾಗದೆ ಊರು ಬಿಟ್ಟ ನಿವಾಸಿಗಳು

ಕುಶಾಲನಗರ, ಜ 20: ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದವರು ಮರುಪಾವತಿ ಸಾಧ್ಯವಾಗದೆ ಊರು ಬಿಟ್ಟ ಪ್ರಕರಣ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯಲ್ಲಿ ಕಂಡುಬಂದಿದೆ.

ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಮೀನುಕೊಲ್ಲಿ ಹಾಡಿ, ದಾಸವಾಳ ಪೈಸಾರಿ, ಬೆಳ್ಳಿ ಕಾಲೋನಿ ಈ ಭಾಗಗಳಲ್ಲಿ ಹಲವಾರು ಜನ ಕೂಲಿ ಕಾರ್ಮಿಕರಿದ್ದು, ಇಲ್ಲಿನ ಕೆಲವು ನಿವಾಸಿಗಳು ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದು ಮರುಪಾವತಿಸಲು ಸಾಧ್ಯವಾಗದೆ ಊರು ಬಿಟ್ಟಿರುವ ಬಗ್ಗೆ ನಂಜರಾಯಪಟ್ಟಣ ಗ್ರಾಪಂ ಅಧ್ಯಕ್ಷ ಸಿ.ಎಲ್. ವಿಶ್ವ ಮಾಹಿತಿ ನೀಡಿದ್ದಾರೆ.

ಸ್ಥಳೀಯ ಸಹಕಾರ ಸಂಘಗಳಿಂದ ಸಾಲ ನೀಡುವಾಗ ಕನಿಷ್ಠ ಮೂರು ಮಂದಿಯ ಜಾಮೀನು ಪಡೆದು ಸಾಲ ನೀಡಲಾಗುತ್ತದೆ. ಆದರೆ ಖಾಸಗಿ ಹಣಕಾಸು ಸಂಸ್ಥೆಗಳು ಸಾಲಗಾರರು ಮರುಪಾವತಿಸಲು ಶಕ್ತರಿದ್ದಾರೆಯೇ ಎಂಬುದನ್ನು ಪರಿಗಣಿಸದೆ ಕೇವಲ ಆಧಾರ್ ಕಾರ್ಡ್ ಆಧಾರವಾಗಿರಿಸಿ ಲಕ್ಷಲಕ್ಷ ಹಣ ಸಾಲ ನೀಡಿದ್ದು, ಇದೇ ರೀತಿ ಹಲವು ಸಂಸ್ಥೆಗಳಿಂದ ಸಾಲ‌ ಪಡೆದವರು ಇದೀಗ ಮರುಪಾವತಿ ಸಾಧ್ಯವಾಗದೆ ಊರು ಬಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮವಹಿಸಿ ನೊಂದವರಿಗೆ ನ್ಯಾಯ ಒದಗಿಸಿಕೊಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!