ಕುಶಾಲನಗರ, ಜ 21: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲ್ಯಾಪ್ರೊಸ್ಕೋಪಿ (ಉದರ ದರ್ಶಕ) ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಅಸ್ವಸ್ಥತೆಯಿಂದ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಾದಾಪಟ್ಟಣ ನಿವಾಸಿ ಶಾಂತಿ (30) ಮೃತ ದುರ್ದೈವಿ.
ಫ್ಯಾಮಿಲಿ ಪ್ಲಾನಿಂಗ್ ಚಿಕಿತ್ಸೆಗೆ ದಾಖಲಾಗಿದ್ದ ಸಂದರ್ಭ ಚಿಕಿತ್ಸೆ ಆರಂಭದಲ್ಲಿ ಮಹಿಳೆಗೆ ಅಸ್ವಸ್ಥತೆ ಉಂಟಾಗಿದೆ. ಕೂಡಲೆ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಗೆ ರವಾನಿಸುವ ಮಾರ್ಗಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸತೀಶ್ ಹಾಗೂ ಎಸ್ಪಿ ರಾಮರಾಜನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಚಿಕಿತ್ಸೆ ಸಂದರ್ಭ ಯಾವ ಕಾರಣದಿಂದ ಮೃತಪಟ್ಟಿದ್ದಾರೆ ಎಂಬುದು ಇನ್ನೂ ದೃಢವಾಗಿಲ್ಲ. ಮೃತ ಮಹಿಳೆ ನಿಧನಕ್ಕೆ ಕಾರಣ ಮರಣೋತ್ತರ ಪರೀಕ್ಷೆ ನಂತರ ತಿಳಿದುಬರಲಿದೆ. ಈ ಬಗ್ಗೆ ಮರಣೋತ್ತರ ಪರೀಕ್ಷೆ ಸಂದರ್ಭ ಖುದ್ದು ಪಾಲ್ಗೊಂಡು ಪರಿಶೀಲನೆ ನಡೆಸಲಾಗುವುದು ಎಂದು ಕೊಡಗು ಎಸ್ಪಿ ರಾಮರಾಜನ್ ಪ್ರತಿಕ್ರಿಯಿಸಿದ್ದಾರೆ.
Back to top button
error: Content is protected !!