ಕುಶಾಲನಗರ, ಫೆ 01: ಆದಿಚುಂಚನಗಿರಿ ವಿಶ್ವ ವಿದ್ಯಾಲಯ,ಆದಿಚುಂಚನಗಿರಿ ಆಸ್ಪತ್ರೆ ಹಾಗೂ ಕುಶಾಲನಗರ ತಾಲ್ಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ಫೆ.4 ರಂದು ಮಂಗಳವಾರ ಕುಶಾಲನಗರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಹೇಳಿದರು.
ಸುದ್ದಿಗೋಷ್ಠಿ ಮಾಹಿತಿ ನೀಡಿದ ಅವರು ಕುಶಾಲನಗರದ ಎಪಿಎಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದ ಆವರಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ನಡೆಯುವ ಆರೋಗ್ಯ ಶಿಬಿರದಲ್ಲಿ ಒಂದು ಸಾವಿರಕ್ಕೂ ಹೆಚ್ಚಿನ ಜನರು ಶಿಬಿರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜೊತೆಗೆ ಸಂಘದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲಿದ್ದಾರೆ. ಆದಿಚುಂಚನಗಿರಿ ಆಸ್ಪತ್ರೆಯ ಸುಮಾರು 15ಕ್ಕೂ ಹೆಚ್ಚಿನ ತಜ್ಞ ವೈದ್ಯರು ಸೇರಿದಂತೆ 110 ಸಿಬ್ಬಂದಿಗಳು ಆಗಮಿಸಲಿದ್ದಾರೆ. ತಾಲ್ಲೂಕಿನ ವಿವಿಧ ಗಿರಿಜನ ಹಾಡಿಗಳಿಗೆ ಆದಿವಾಸಿ ಜನರನ್ನು ಕರೆ ತರಲು ಸಂಘದಿಂದ ಉಚಿತ ವಾಹನ ವ್ಯವಸ್ಥೆ ಕೂಡ ಮಾಡಲಾಗಿದೆ. ಶಿಬಿರಕ್ಕೆ ಬರುವ ರೋಗಿಗಳಿಗೆ ಹಾಗೂ ವೈದ್ಯರು, ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರತಿ ವರ್ಷ ಸಂಘದ ಮೂಲಕ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲು ಚಿಂತನೆ ಹೊಂದಲಾಗಿದೆ. ತಪಾಸಣೆಗೆ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕೌಂಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಶಿಬಿರದಲ್ಲಿ ಹೃದ್ರೋಗ ತಜ್ಞರು, ವೈದ್ಯಕೀಯ ತಜ್ಞರು, ಮಕ್ಕಳ ತಜ್ಞರು, ನರರೋಗ ತಜ್ಞರು, ಶಸ್ತ್ರ ಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಮೂತ್ರಪಿಂಡ ತಜ್ಞರು, ಗರ್ಭಿಣಿ ಮತ್ತು ಸ್ತ್ರೀ-ರೋಗ ತಜ್ಞರು, ಚರ್ಮರೋಗ ತಜ್ಞರು, ಮಧುಮೇಹ ತಜ್ಞರು, ಕೀಲು ಮೂಳೆ ತಜ್ಞರು, ಮಾನಸಿಕ ರೋಗ ತಜ್ಞರು, ಪಿತ್ತ ಜನಕಾಂಗದ ತಜ್ಞರು, ದಂತ ವೈದ್ಯ ತಜ್ಞರು, ಕ್ಯಾನ್ಸ್ ತಪಾಸಣಾ ತಜ್ಞರು, ಕಿವಿ, ಮೂಗು, ಗಂಟಲು ತಜ್ಞರು ಆಗಮಿಸಲಿದ್ದಾರೆ.
ಶಿಬಿರದಲ್ಲಿ ಇ.ಸಿ.ಜಿ ಮತ್ತು ರಕ್ತ ಪರೀಕ್ಷೆಗಳನ್ನು ಉಚಿತವಾಗಿ ಮಾಡಿ ಔಷಧಿಗಳನ್ನು ಉಚಿತವಾಗಿ ನೀಡಲಾಗುವುದು.
ಸ್ತ್ರೀಯರಿಗೆ ಬಳಿಸೆರಗು, ಬಂಜೆತನ, ಗರ್ಭಕೋಶದ ತೊಂದರೆ ಇನ್ನಿತರ ಸ್ತ್ರೀ ರೋಗಗಳಿಗೆ ನುರಿತ ಸ್ತ್ರೀ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು.
ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು
ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸುವರು.
ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮಿ ದಿವ್ಯ ಸನ್ನಿಧ್ಯ ವಹಿಸುವರು ಅತಿಥಿಗಳಾಗಿ ಜಿಲ್ಲಾ ಒಕ್ಕಲಿಗರ ಸಂಘದ ಚಂಗಪ್ಪ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಂ.ಎಂ.ಪ್ರಕಾಶ್, ನಿರ್ದೇಶಕ ಮಧುಕುಮಾರ್ ಇದ್ದರು.
Back to top button
error: Content is protected !!