ಕುಶಾಲನಗರ, ಜು 25: ಮುಳ್ಳುಸೋಗೆ ಗ್ರಾಪಂ ವ್ಯಾಪ್ತಿಯ ಗೊಂದಿಬಸವನಹಳ್ಳಿ ವ್ಯಾಪ್ತಿಯಲ್ಲಿ ರಸ್ತೆ ವ್ಯವಸ್ಥೆ ಹದಗೆಟ್ಟಿದ್ದು ಹಲವು ಬಡಾವಣೆಗಳಿಗೆ ಸಮರ್ಪಕ ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ಮಳೆಗಾಲದಲ್ಲಿ ನಾಗರಿಕರು ತೀವ್ರ ಸಮಸ್ಯೆಗೆ ಒಳಗಾಗುತ್ತಿರುವ ಬಗ್ಗೆ ಸ್ಪಂದಿಸಿದ ಮುಳ್ಳುಸೋಗೆ ಗ್ರಾಪಂ ರಸ್ತೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಒದಗಿಸಿದೆ.
ಗೊಂದಿಬಸವನಹಳ್ಳಿ ಗ್ರಾಮದ ರಾಮ್ಕೋ ಸಿಮೆಂಟ್ ಗೋದಾಮು ಬಳಿಯಿರುವ ವಾಟರ್ ಟ್ಯಾಂಕ್ ಹತ್ತಿರದ ರಸ್ತೆ ಸಂಪೂರ್ಣ ಕೆಸರುಮಯವಾಗಿತ್ತು. ಮೇಲ್ಭಾಗದಿಂದ ಹರಿದು ಬರುವ ನೀರು ಈ ರಸ್ತೆ ಮೇಲೆ ಹರಿಯುತ್ತಿದೆ. ಚರಂಡಿ ಇಲ್ಲದ ಕಾರಣ ನೀರು ನಿಂತು ರಸ್ತೆ ಸಂಪೂರ್ಣ ಕೆಸರುಮಯವಾಗಿ ಕಾಲ್ನಡಿಗೆಯಲ್ಲಿ ಸಂಚರಿಸಲು ಕೂಡ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೂಡಲೆ ರಸ್ತೆ ವ್ಯವಸ್ಥೆ ಸರಿಪಡಿಸಲು ಕೋರಿ ಗ್ರಾಮಸ್ಥರು ಗ್ರಾಪಂ ಗೆ ಮನವಿ ಸಲ್ಲಿಸಿದರು.
ಕೂಡಲೆ ಸ್ಪಂದಿಸಿದ ಗ್ರಾಪಂ ಪಿಡಿಒ ಹಾಗೂ ಆಡಳಿತ ಮಂಡಳಿ ಹದಗೆಟ್ಟ ರಸ್ತೆಗೆ ಮೂರು ಟ್ರಾಕ್ಟರ್ ವೆಟ್ ಮಿಕ್ಸ್ ಸುರಿದು ಕೆಸರುಮಯ ರಸ್ತೆಯನ್ನು ಸರಿಪಡಿಸಿದೆ.
ಸದರಿ ರಸ್ತೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಅಭಿವೃದ್ಧಿ ಪಡಿಸುವ ಸಲುವಾಗಿ ಈಗಾಗಲೇ ಕ್ರಿಯಾ ಯೋಜನೆಯನ್ನು ರೂಪಿಸಿ ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿದೆ ಎಂದು ಗ್ರಾಪಂ ಪಿಡಿಒ ಸುಮೇಶ್ ತಿಳಿಸಿದ್ದಾರೆ.
Back to top button
error: Content is protected !!