ಸುದ್ದಿಗೋಷ್ಠಿ

ನಾಳೆ ಕುಶಾಲನಗರದಲ್ಲಿ ‘ಶ್ರೀಕೃಷ್ಣ ಸಂಧಾನ’ ಹಾಸ್ಯ ನಾಟಕ ಉಚಿತ ಪ್ರದರ್ಶನ

ಕುಶಾಲನಗರ, ಫೆ 17: ಕೊಡಗು‌ ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಮಂಗಳವಾರ ಸಂಜೆ (ಫೆ.18) ಕುಶಾಲನಗರದ ಗಾಯತ್ರೀ ಕಲ್ಯಾಣ ಮಂಟಪದಲ್ಲಿ ಶ್ರೀಕೃಷ್ಣ ಸಂಧಾನ ಎಂಬ ನಾಟಕ ಪ್ರದರ್ಶನ ಉಚಿತವಾಗಿ ಏರ್ಪಡಿಸಲಾಗಿದೆ ಎಂದರು ಸಂಘದ ಅಧ್ಯಕ್ಷ ಆವರ್ತಿ‌ ಮಹದೇವಪ್ಪ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೆರೆ ಗ್ರಾಮದ ಧಾತ್ರಿ ರಂಗಸಂಸ್ಥೆ ಕಲಾವಿದರಿಂದ ನಗೆ ನಾಟಕ ಪ್ರದರ್ಶನ ನಡೆಯಲಿದೆ. ಅಂದು ಸಂಜೆ 6 ರಿಂದ 8.30 ರ ತನಕ‌ ನಾಟಕ ನಡೆಯಲಿದ್ದು ಎಲ್ಲರಿಗೂ ಉಚಿತ ಪ್ರವೇಶವಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ನಾಟಕ ಸಂಪೂರ್ಣ ಹಾಸ್ಯಮಯವಾಗಿದ್ದು ಈ ನಾಟಕ ನೋಡಿ ನಗದಿದ್ದವರಿಗೆ ಸ್ಥಳದಲ್ಲೇ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಸಮಾಜ ಸೇವಕರಾದ ರಾಜೇಗೌಡರು ನಾಟಕ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಗಾಯತ್ರಿ‌ಕಲ್ಯಾಣ ಮಂಟಪ ಮಾಲೀಕರಾದ ಕೆ.ಬಿ.ಗಾಯತ್ರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಘದ ಮಾಜಿ ಜಿಲ್ಲಾಧ್ಯಕ್ಷ ಗುಡ್ಡೆಮನೆ‌ ವಿಶ್ವಕುಮಾರ್ ಮಾತನಾಡಿ, ದೈನಂದಿನ ಒತ್ತಡದ ಜೀವನದ‌ ನಡುವೆ ಮನಸ್ಸಿಗೆ ಒಂದಷ್ಟು ಆಹ್ಲಾದ ಉಂಟುಮಾಡುವ ಕಾರ್ಯಕ್ರಮ ಇದಾಗಿದ್ದು, ನಗುವಿನಿಂದ ಆರೋಗ್ಯ ಸುಧಾರಿಸಲಿದೆ. ಈ ಹಿನ್ನಲೆಯಲ್ಲಿ ಪ್ರೇಕ್ಷಕರು ಹೆಚ್ಚಾಗಿ ಭಾಗವಹಿಸಲು ಕೋರಿದರು.

ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಡೇವಿಡ್ ಸೋಲೋಮನ್ ಮಾತನಾಡಿ, ಸಂಘದ ವತಿಯಿಂದ ಸಂಘದ ಸದಸ್ಯರಿಗೆ ‌ಮಾತ್ರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿತ್ತು. ಇದೇ ಪ್ರಥಮ ಬಾರಿಗೆ ಸಾರ್ವಜನಿಕರಿಗೆ ವಿಭಿನ್ನ‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ
ಕುಶಾಲನಗರ ತಾಲೂಕು ಅಧ್ಯಕ್ಷ ವಿಜಯ್ ಕುಮಾರ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!