ಶಿಕ್ಷಣ

ಹೆಬ್ಬಾಲೆ ಶಾಲೆಯಲ್ಲಿ ಸ್ವೆಟರ್ ವಿತರಣೆ

ಕುಶಾಲನಗರ, ಮಾ 04:ಮಡಿಕೇರಿ ಕ್ಷೇತ್ರದ ಮಾಜಿ ಶಾಸಕರು ಹಾಗೂ ರಾಜ್ಯ ಕ್ರೀಡಾ ಸಚಿವರಾಗಿದ್ದ ಎಂ.ಪಿ. ಅಪ್ಪಚ್ಚುರಂಜನ್ ಕುಶಾಲನಗರ ತಾಲೂಕು ಹೆಬ್ಬಾಲೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 78 ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂದು ಸ್ವೆಟರ್ ವಿತರಿಸಿ

ಮಾತನಾಡಿದ ಅವರು ಕೊಡಗು ಜಿಲ್ಲೆಯಾದ್ಯಂತ 90,000 ಮಕ್ಕಳಿಗೆ ಸ್ವೆಟರ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮುಂದಿನ ಮಳೆಗಾಲ ಮತ್ತು ಚಳಿಗಾಲದಲ್ಲಿ ಶಾಲೆಯ ಮಕ್ಕಳಿಗೆ ಅನುಕೂಲವಾಗಲಿದೆ. ಸರ್ಕಾರಿ ಶಾಲೆಯ ಮಕ್ಕಳು ಬಡ ಕುಟುಂಬದಿಂದ ಬಂದವರಾಗಿದ್ದು ಇವರಲ್ಲಿ ದಲಿತ ವಿದ್ಯಾರ್ಥಿಗಳು ಸಹ ವ್ಯಾಸಂಗ ಮಾಡುತ್ತಿದ್ದು ಎಲ್ಲರೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇವರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರದೀಪ್. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅರುಣ ಕುಮಾರಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ ಜೋಗಿ. ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ತೊರೆನೂರು ಪಂಚಾಯತಿಯ ಮಾಜಿ ಅಧ್ಯಕ್ಷರಾದ ದೇವರಾಜು. ರೂಪ ಮಹೇಶ್. ಉಪಾಧ್ಯಕ್ಷರಾದ ಬೇಬಿ ಹೆಬ್ಬಾಲೆ ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಂ.ವೆಂಕಟೇಶ ಸಹ ಶಿಕ್ಷಕಿ ಜಾನಕಿ. ಬಬಿತ. ವಂಜಮ್ಮ ರಮ್ಯಾ ಶಿವಾನಂದ ಗ್ರಾಮಸ್ಥರು ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಾವತಿಯವರು ಸರ್ವರನ್ನು ಸ್ವಾಗತಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!