ಕುಶಾಲನಗರ, ಮಾ 17: ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಶೈಲಜಾ ಬಡವಾಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಆರ್.ವಿ.ಗಂಗಾಧರಪ್ಪ, ಡಿವೈಎಸ್ಪಿ, ಸೋಮವಾರಪೇಟೆ ಉಪವಿಭಾಗ, ಪ್ರಕಾಶ್.ಬಿ.ಜಿ. ಪಿಐ, ಮತ್ತು ಗೀತಾ, ಪಿಎಸ್‌ಐ, ಕುಶಾಲನಗರ ಟೌನ್ ಪೊಲೀಸ್ ಠಾಣೆ & ಸಿಬ್ಬಂದಿಗಳು ಹಾಗೂ ಡಿಸಿಆರ್‌ಬಿ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 15-03-2025 ರಂದು ಶೈಲಜಾ ಬಡವಾಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಹೇರೂರು ಗ್ರಾಮದ ನಿವಾಸಿ ಪ್ರಶಾಂತ್, (29 ವರ್ಷ) ಎಂಬಾತನನ್ನು ನಿಷೇಧಿತ ಮಾದಕ ವಸ್ತು 1 ಕೆ.ಜಿ 731 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಸದರಿ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
Back to top button
error: Content is protected !!