ಕುಶಾಲನಗರ, ಮಾ 21:ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದ ಕುರುಳಿ ರಸ್ತೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಮಾರಾಟ /ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹೆಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸೂರಜ್.ಪಿ.ಎ. ಡಿಎಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪಪಿ, ಸಿಪಿಐ, ಪ್ರಭಾರ ಮಡಿಕೇರಿ ಗ್ರಾಮಾಂತರ ವೃತ್ತ ಮತ್ತು ಮಂಜುನಾಥ.ಈ. ಪಿಎಸ್‌ಐ, ನಾಪೋಕ್ಲು ಪೊಲೀಸ್ ಠಾಣೆ & ಸಿಬ್ಬಂದಿಗಳು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 20-03-2025 ರಂದು ಎಮ್ಮೆಮಾಡು ಗ್ರಾಮದ ಕುರುಳಿ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತು MDMA ಮಾರಾಟ/ಸರಬರಾಜು ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿ ಎಮ್ಮೆಮಾಡು ಗ್ರಾಮದ ನಿವಾಸಿಗಳಾದ 1) ಸಾಧಿಕ್.ಎಂ.ಹೆಚ್, (30 ವರ್ಷ), 2) ಅಶ್ರಫ್ ಕೆ.ಎಂ. (44 ವರ್ಷ) ಮತ್ತು 3) ಸರ್ಫುದ್ದೀನ್, (24 ವರ್ಷ) ಎಂಬುವವರನ್ನು 10.37 ಗ್ರಾಂ MDMA ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಕಾರು (ಮಾರುತಿ ಬ್ರೀಜಾ) ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
Back to top button
error: Content is protected !!