ಕುಶಾಲನಗರ, ಮೇ. 15: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಸೀಗೆಹೊಸೂರು ರಸ್ತೆಯು ತೀರಾ ಗುಂಡಿಮಯವಾಗಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಯವರು ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಿ ಸರಿಪಡಿಸುವಂತೆ ಸ್ಥಳೀಯ ಗ್ರಾಮಸ್ಥರ ಒತ್ತಾಯಿಸಿದ್ದಾರೆ.
ಮದಲಾಪುರ-ಸೀಗೆಹೊಸೂರು ರಸ್ತೆಯಲ್ಲಿ ಕಲ್ಲು ತುಂಬಿದ ಲಾರಿಗಳ ಓಡಾಟದಿಂದಾಗಿ ರಸ್ತೆಯು ಸಂಪೂರ್ಣವಾಗಿ ಹಾಳಾಗಿದೆ. ಅಲ್ಲದೆ ಇದೀಗ ಮಳೆ ಬೀಳಲು ಆರಂಭವಾಗಿರುವ ಹಿನ್ನೆಲೆಯಲ್ಲಿ ಹಾಳಾಗಿರುವ ರಸ್ತೆಯಲ್ಲಿ ಮಳೆ ನೀರು ನಿಂತು ಕೆರೆಯಂತೆ ಆಗಿದೆ. ಅದರಿಂದಾಗಿ ಸಂಬಂಧಿಸಿದ ಇಲಾಖೆಯವರು ತಕ್ಷಣವೇ ಸ್ಪಂದಿಸುವ ಕಾರ್ಯದಲ್ಲಿ ತೊಡಗಬೇಕು ಮುಂದಾಗುವ ಅನಾಹುತಗಳನ್ನು ತಪ್ಪಿಸಲು ಮುಂದಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Back to top button
error: Content is protected !!