ಕುಶಾಲನಗರ, ಜೂ 17: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಕಾವೇರಿ ಹಾಗೂ ಹಾರಂಗಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆಯಾಗಿದೆ.
ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಮುಂಭಾಗದ 15 ಕ್ಕೂ ಹೆಚ್ಚು ಮೆಟ್ಟಿಲುಗಳು ನೀರಿನಿಂದ ಮುಳುಗಡೆಯಾಗಿದೆ. ಹಾರಂಗಿ ಜಲಾಶಯದಿಂದ ಹೊರಹರಿವು ಹೆಚ್ಚಿಸಿದ್ದು ತಗ್ಗು ಪ್ರದೇಶದ ಗದ್ದೆಗಳು ಜಲಾವೃತಗೊಂಡಿವೆ.