ಕ್ರೈಂ

ನಿಷೇದಿತ ಮಾದಕ ವಸ್ತು ಮಾರಾಟ: ಓರ್ವನ ಬಂಧನ

ಕುಶಾಲನಗರ, ಜೂ 18:ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊನ್ನಂಪೇಟೆ ನಗರದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA & ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್‌ ಯಶಸ್ವಿಯಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ  ಮಹೇಶ್ ಕುಮಾರ್, ಡಿಎಸ್‌ಪಿ, ವಿರಾಜಪೇಟೆ ಉಪವಿಭಾಗ, .ಶಿವರುದ್ರ,ಬಿ.ಎಸ್. ಸಿಪಿಐ, ಪ್ರಭಾರ ಗೋಣಿಕೊಪ್ಪ ವೃತ್ತ ಹಾಗೂ ನವೀನ್.ಜಿ, ಪಿಎಸ್‌ಐ, ಪೊನ್ನಂಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 17-06-2025 ರಂದು ಪೊನ್ನಂಪೇಟೆ ನಗರದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ  ಗೋಣಿಕೊಪ್ಪದ ನಿವಾಸಿ ಗುರುದತ್, (30 ವರ್ಷ) ಎಂಬಾತನನ್ನು MDMA ಮಾದಕ ವಸ್ತು 4 ಗ್ರಾಂ ಹಾಗೂ 1 ಕೆಜಿ 79ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮತ್ತು ಕೃತ್ಯಕ್ಕೆ ಬಳಸಿದ KA-12 27073 ಮಾರುತಿ ಬ್ರಿಜಾ ಕಾರ್ & KA-03-MU-5381 Alto K10 ಕಾರನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು  ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!