ಪ್ರತಿಭಟನೆ

ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿರುದ್ಧ ಕುಶಾಲನಗರದಲ್ಲಿ ಎಸ್ಡಿಪಿಐ ಪ್ರತಿಭಟನೆ

ಕುಶಾಲನಗರ, ಜೂ 25: ಮುಸ್ಲಿಮರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬುಧವಾರ ಸಂಜೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಶಾಲನಗರ ಶಾಖೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಎಸ್ಡಿಪಿಐ ನಗರ ಅಧ್ಯಕ್ಷ ಜಾಕ್ರಿಯಾ ನೇತೃತ್ವದಲ್ಲಿ ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು ಶಾಸಕ ರಮೇಶ್ ಬಂಡಿಸಿದ್ದೇಗೌಡ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದಿಂದ ಅವರನ್ನು ಕೂಡಲೇ ವಜಾ ಮಾಡಬೇಕು.ಶಾಸಕ ಸ್ಥಾನವನ್ನು ರದ್ದು ಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭ ಎಸ್ಡಿಪಿಐ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!